ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಪ್ರಕರಣಗಳ ಹೆಚ್ಚಳ: ದೆಹಲಿಯಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ

Last Updated 27 ಡಿಸೆಂಬರ್ 2021, 6:39 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಮತ್ತು ಓಮೈಕ್ರಾನ್ ಆತಂಕದ ನಡುವೆ ದೆಹಲಿಯಲ್ಲಿ ಇಂದಿನಿಂದ (ಡಿ.27) ರಾತ್ರಿ 11 ಗಂಟೆಯಿಂದ ಬೆಳಗ್ಗೆ 5ರವರೆಗೆ ರಾತ್ರಿ ಕಫ್ಯೂ ವಿಧಿಸಿ ದೆಹಲಿಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) ಆದೇಶಿಸಿದೆ.

ದೇಶದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಅಧಿಕ 142 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.

ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ನ್ಯಾಯಾಂಗದ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ, ಗರ್ಭಿಣಿಯರು ಮತ್ತು ರೋಗಿಗಳು, ಅಗತ್ಯ ವಸ್ತುಗಳ ಖರೀದಿಗೆ ಕಾಲ್ನಡಿಗೆಯಲ್ಲಿ ತೆರಳುವ ಜನರು, ಮಾಧ್ಯಮದವರು, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಿಗೆ ತೆರಳುವ ಮತ್ತು ಬರುವವರಿಗೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ.

ರಾತ್ರಿ ಕರ್ಫ್ಯೂ ಅವಧಿಯಲ್ಲಿ ವಿನಾಯಿತಿ ಇರುವ ಜನರಿಗೆ ಮಾತ್ರ ಮೆಟ್ರೊ ರೈಲು ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ ಅವಕಾಶವಿದೆ ಎಂದು ಡಿಡಿಎಂಎ ಆದೇಶದಲ್ಲಿ ತಿಳಿಸಿದೆ.

ದೆಹಲಿಯಲ್ಲಿ ಭಾನುವಾರ ಹೊಸದಾಗಿ 290 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ 0.55ರಷ್ಟಿದೆ. ಮುಂದಿನ ಎರಡು ದಿನಗಳಲ್ಲಿ ಪಾಸಿಟಿವಿಟಿ ದರವು ಶೇ 0.5ರಷ್ಟಿದ್ದರೆ 'ಯೆಲ್ಲೋ ಅಲರ್ಟ್' ಘೋಷಿಸಲಾಗುತ್ತದೆ ಎಂದು ಗ್ರೇಡೆಡ್ ರೆಸ್ಪಾನ್ಸ್ ಆ್ಯಕ್ಷನ್ ಪ್ಲಾನ್ (ಜಿಆರ್‌ಎಪಿ) ತಿಳಿಸಿದೆ.

ರಾತ್ರಿ ಕರ್ಫ್ಯೂ, ಶಾಲಾ-ಕಾಲೇಜುಗಳನ್ನು ಮುಚ್ಚುವಿಕೆ, ಮೆಟ್ರೊ ರೈಲು ಮತ್ತು ಬಸ್‌ಗಳಲ್ಲಿ ಆಸನ ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಅವಕಾಶ, ಅನಿವಾರ್ಯವಲ್ಲದ ಅಂಗಡಿಗಳು ಮತ್ತು ಮಾಲ್‌ಗಳನ್ನು ಮುಚ್ಚುವುದು ಸೇರಿದಂತೆ ಇತರೆ ಕ್ರಮಗಳನ್ನು 'ಯೆಲ್ಲೋ ಅಲರ್ಟ್‌'ನಲ್ಲಿ ಕೈಗೊಳ್ಳಲಾಗುತ್ತದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT