ನವದೆಹಲಿ: ಇಂದು ಬೆಳಗ್ಗೆ ರೈತರು ಪ್ರತಿಭಟನೆ ನಡೆಸುತ್ತಿರುವ ನವದೆಹಲಿಯ ಸಿಂಘು ಗಡಿಯಲ್ಲಿ ಕೈಕತ್ತರಿಸಿದ ಮೃತ ದೇಹ ಪತ್ತೆಯಾದ ಪ್ರಕರಣಕ್ಕೆ ಸಂಜೆ ವೇಳೆಗೆ ಟ್ವಿಸ್ಟ್ ಸಿಕ್ಕಿದೆ. ಆ ಕೊಲೆ ಮಾಡಿದ್ದು ನಾನೇ ಎಂದು ನಿಹಾಂಗ್ ಸಮುದಾಯದ ಸರವಜೀತ್ ಸಿಂಗ್ ಎಂಬ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನ ಗುರುತು ಮತ್ತೆ ಮಾಡಲು ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ಬಳಸಲಿದ್ದು, ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ಧಾರೆ.

ದೆಹಲಿಯ ಸಿಂಘು ಗಡಿಯಲ್ಲಿ 35 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆತನ ಒಂದು ಕೈ ಮತ್ತು ಕಾಲುಗಳನ್ನು ಕತ್ತರಿಸಲಾಗಿತ್ತು. ಮೃತದೇಹವನ್ನು ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದ ಬಳಿ ಪೊಲೀಸ್ ಬ್ಯಾರಿಕೇಡ್‌ಗೆ ಕಟ್ಟಿಹಾಕಲಾಗಿತ್ತು.

ಮೃತನನ್ನು ಲಖಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆತ ಲಖ್ಬೀರ್ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದು, ಯಾವುದೇ ಅಪರಾಧ ಹಿನ್ನೆಲೆ ಅಥವಾ ರಾಜಕೀಯ ಸಂಬಂಧ ಹೊಂದಿಲ್ಲ.

ಇದನ್ನೂ ಓದಿ.. ಸಿಂಘು ಗಡಿ: ಪ್ರತಿಭಟನಾ ಸ್ಥಳದ ಬಳಿ ಕೈ ಕತ್ತರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಲಖಬೀರ್ ಸಿಂಗ್ ಪಂಜಾಬ್‌ನ ಚೀಮಾ ಖುರ್ದ್ ಹಳ್ಳಿಯ ನಿವಾಸಿಯಾಗಿದ್ದು, ಪತ್ನಿ ಜಸ್‌ಪ್ರೀತ್ ಕೌರ್, 8,10 ಮತ್ತು 12 ವರ್ಷದ ಮೂವರು ಮಕ್ಕಳನ್ನು ಅಗಲಿದ್ದಾರೆ.

ಶುಕ್ರವಾರ ವ್ಯಕ್ತಿಯನ್ನು ಕೊಂದಿರುವುದಾಗಿ ನಿಹಾಂಗ್ ಗುಂಪು ಒಪ್ಪಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.