ನವದೆಹಲಿ: ನಿಮಿಷ ಪ್ರಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯೆಮನ್ನಲ್ಲಿರುವ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಭಾರತದ ವಿದೇಶಾಂಗ ಸಚಿವಾಲಯ(ಎಂಇಎ) ಗುರುವಾರ ತಿಳಿಸಿದೆ.

‘ಇದೊಂದು ಸೂಕ್ಷ್ಮ ವಿಷಯವಾಗಿದ್ದು, ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ಸಹಕಾರವನ್ನು ಕೇಂದ್ರ ಸರ್ಕಾರ ನೀಡುತ್ತಿದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

‘ಈ ಪ್ರಕರಣದಲ್ಲಿ ಕಾನೂನು ನೆರವು ನೀಡುವುದರ ಜೊತೆಗೆ ನಿಮಿಷ ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನು ನೇಮಿಸಿದ್ದೆವೆ. ಗಲ್ಲು ಶಿಕ್ಷೆಯಿಂದ ಪಾರು ಮಾಡಲು ಯೆಮನ್ನ ಸ್ಥಳೀಯ ಅಧಿಕಾರಿಗಳು ಮತ್ತು ನಿಮಿಷ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ’ ಎಂದು ತಿಳಿಸಿದ್ದಾರೆ.

‘ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದೇವೆ. ಕೆಲವು ಸ್ನೇಹಪರ ಸರ್ಕಾರಗಳೊಂದಿಗೂ ಸಂಪರ್ಕದಲ್ಲಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

ಯೆಮನ್ ಪ್ರಜೆಯನ್ನು ಕೊಲೆ ಮಾಡಿದ ಆರೋಪದ ಮೇಲೆ 2020ರಲ್ಲಿ ಅಲ್ಲಿನ ವಿಚಾರಣಾ ನ್ಯಾಯಾಲಯ ಕೇರಳ ಮೂಲದ ನರ್ಸ್ ನಿಮಿಷಾಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2023ರಲ್ಲಿ ಯೆಮನ್ನ ಸುಪ್ರೀಂ ಕೋರ್ಟ್ ಈ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು.

ಇದೇ ಜುಲೈ 16ರಂದು ನಿಮಿಷಳನ್ನು ಗಲ್ಲಿಗೇರಿಸಲು ನಿರ್ಧರಿಸಲಾಗಿತ್ತು. ಮುಸ್ಲಿಂ ಮುಖಂಡರ ಮಧ್ಯ ಪ್ರವೇಶದಿಂದ ಕೊನೆ ಕ್ಷಣದ ಮಾತುಕತೆ ಫಲಪ್ರದವಾಗಿದ್ದು ಸದ್ಯ ಗಲ್ಲು ಶಿಕ್ಷೆ ಮುಂದೂಡಲ್ಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.