ಮೃತರು ಛತ್ ಪೂಜೆ ಮುಗಿಸಿ ಆಟೊ ರಿಕ್ಷಾದಲ್ಲಿಕರೀಂಗಂಜ್ ಕಡೆಗೆ ತೆರಳುತ್ತಿದ್ದಾಗ, ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಕರೀಂಗಂಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು, ಪೊಲೀಸರು ಆತನ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.ಮೃತರನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.