ನವದೆಹಲಿ: ನಗರ ಮತ್ತು ಪಟ್ಟಣ ಪ್ರದೇಶಗಳ ಒಳಚರಂಡಿ ನೀರು ಹಾಗೂ ಆಯಾ ಜಲಾನಯನ ಪ್ರದೇಶಗಳಲ್ಲಿನ ಕೈಗಾರಿಕೆಗಳ ತ್ಯಾಜ್ಯ ಸೇರುತ್ತಿರುವುದರಿಂದ ರಾಜ್ಯದ 10 ನದಿಗಳು ಕಲುಷಿತಗೊಂಡಿವೆ ಎಂದು ಕರ್ನಾಟಕ ಸರ್ಕಾರವೇ ಒಪ್ಪಿಕೊಂಡಿದೆ.
ರಾಜ್ಯದ ನದಿಗಳು ಮಲಿನಗೊಂಡಿರುವ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‌ಜಿಟಿ) ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (ಕೆಎಸ್‌ಪಿಸಿಬಿ) ಈ ಸಂಬಂಧ ಪ್ರಮಾಣಪತ್ರ ಸಲ್ಲಿಸಿದೆ.
ರಾಜ್ಯದ 17 ನದಿಗಳು ಕಲುಷಿತಗೊಂಡಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (ಸಿಪಿಸಿಬಿ) 2022ರಲ್ಲಿ ಜಲಶಕ್ತಿ ಸಚಿವಾಲಯಕ್ಕೆ ವರದಿ ಸಲ್ಲಿಸಿತ್ತು. ‘ಶರಾವತಿ, ಗಂಗಾವಳಿ, ಅಘನಾಶಿನಿ, ಕೃಷ್ಣಾ, ಕಾಗಿನ ಹಾಗೂ ನೇತ್ರಾವತಿ ನದಿಗಳಲ್ಲಿ ಕರಗಿದ ಆಮ್ಲಜನಕದ (ಬಿಒಡಿ) ಪ್ರಮಾಣ 3 ಮಿಲಿಗ್ರಾಂ/ಲೀಟರ್ ದಾಟಿಲ್ಲ. ಹೀಗಾಗಿ, ಈ ನದಿಗಳನ್ನು ಕಲುಷಿತ ನದಿಗಳ ಪಟ್ಟಿಯಿಂದ ಕೈಬಿಡಬೇಕು ಎ…
ಹೈಕಮಾಂಡ್ ಭೇಟಿಗೆ ಸಿಎಂ, ಡಿಸಿಎಂ ನವದೆಹಲಿಗೆ
ನವದೆಹಲಿ: ಮುಡಾ ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್‌ನ ಉನ್ನತ ನಾಯಕರನ್ನು ಶುಕ್ರವಾರ ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಉಭಯ ನಾಯಕರು ಭೇಟಿ ಮಾಡಲಿದ್ದಾರೆ. ಮುಡಾ ಹಗರಣ, ಆ ನಂತರದ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.