ಮಲಪ್ಪುರಂ: ನಿಫಾ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ 6 ಮಂದಿಯಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕೇರಳ ಸರ್ಕಾರ ಶುಕ್ರವಾರ ತಿಳಿಸಿದೆ.

ಆರೋಗ್ಯ ಸಚಿವೆ ವೀಣಾ ಜಾರ್ಜ್ ನೇತೃತ್ವದಲ್ಲಿ ಮಲಪ್ಪುರಂ ಜಿಲ್ಲಾಡಳಿತ ಕಚೇರಿಯಲ್ಲಿ ಉನ್ನತ ಹಂತದ ಸಮಿತಿ ಸಭೆ ನಡೆಯಿತು.

ಈ ಕುರಿತು ಪ್ರತಿಕ್ರಿಯಿಸಿದ ಸಚಿವೆ ವೀಣಾ ಜಾರ್ಜ್, ‘ನಿಫಾ ಸೋಂಕಿತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.

ಸೋಂಕಿತನ ಸಂಪರ್ಕಕ್ಕೆ ಬಂದಿದ್ದ 49 ಮಂದಿಯ ಮೇಲೆ ನಿಗಾ ವಹಿಸಲಾಗಿದೆ. ಇದರಲ್ಲಿ 12 ಮಂದಿ ಕುಟುಂಬ ಸದಸ್ಯರಾಗಿದ್ದಾರೆ. ಈ ಪೈಕಿ ಸೋಂಕಿನ ಸೌಮ್ಯ ಗುಣಲಕ್ಷಣ ಕಂಡುಬಂದ ಐವರನ್ನು ಮಂಜೇರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಮತ್ತು ಎರ್ನಾಕುಲಂ ಮೂಲದ ಶುಶ್ರೂಷಕಿಯನ್ನು ಪೆರಿಂಥಲ್ಮನ್ನ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗಿತ್ತು. ಇವರೆಲ್ಲರ ವೈದ್ಯಕೀಯ ಪರೀಕ್ಷಾ ವರದಿ ಬಂದಿದ್ದು, 6 ಮಂದಿ ಸುರಕ್ಷಿತವಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.