ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೇಸ್‌ಬುಕ್‌ನಲ್ಲಿ ಕಮೆಂಟ್‌: ಪ್ರಾಧ್ಯಾಪಕಿ ವಿರುದ್ಧ ತನಿಖೆಗೆ ಸಮಿತಿ ರಚಿಸಿದ NIT

Published 11 ಫೆಬ್ರುವರಿ 2024, 15:43 IST
Last Updated 11 ಫೆಬ್ರುವರಿ 2024, 15:43 IST
ಅಕ್ಷರ ಗಾತ್ರ

ಕೋಯಿಕ್ಕೋಡ್‌ (ಕೇರಳ): ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿ ಫೇಸ್‌ಬುಕ್‌ನಲ್ಲಿ ಕಮೆಂಟ್‌ ಮಾಡಿರುವ ಪ್ರಾಧ್ಯಾಪಕಿ ವಿರುದ್ಧ ತನಿಖೆ ನಡೆಸಲು ಕ್ಯಾಲಿಕಟ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್‌ಐಟಿ) ಸಮಿತಿಯನ್ನು ರಚಿಸಿದೆ.

‘ಸಮಿತಿಯ ವರದಿ ಆಧರಿಸಿ ಪ್ರೊ.ಎ.ಶೈಜಾ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಹಾತ್ಮ ಗಾಂಧಿಯ ತತ್ವ ಮತ್ತು ಸಿದ್ದಾಂತಗಳಿಗೆ ವಿರುದ್ಧವಾದ ಹೇಳಿಕೆಯನ್ನು ಎನ್‌ಐಟಿ ಯಾವತ್ತಿಗೂ ಬೆಂಬಲಿಸುವುದಿಲ್ಲ’ ಎಂದು ಎನ್‌ಐಟಿ ಶನಿವಾರ ತಿಳಿಸಿದೆ.

ಫೇಸ್‌ಬುಕ್‌ನಲ್ಲಿ ಗೋಡ್ಸೆ ಚಿತ್ರವೊಂದಕ್ಕೆ ಪ್ರತಿಕ್ರಿಯಿಸಿದ್ದ ಶೈಜಾ ಅವರು, ‘ದೇಶವನ್ನು ರಕ್ಷಿಸಿರುವ ಗೋಡ್ಸೆ ಬಗ್ಗೆ ಹೆಮ್ಮೆಯಿದೆ’ ಎಂದು ಕಮೆಂಟ್‌ ಮಾಡಿದ್ದರು. ಪ್ರೊ.ಶೈಜಾ ವಿರುದ್ಧ ಹಲವಾರು ವಿದ್ಯಾರ್ಥಿ ಸಂಘಟನೆಗಳು ದೂರು ದಾಖಲಿಸಿದ್ದವು. ಶೈಜಾ ಮೇಲೆ ಎಫ್‌ಐಆರ್‌ ಕೂಡಾ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT