ಭುವನೇಶ್ವರ: ರಿಲಯನ್ಸ್ ಫೌಂಡೇಶನ್ನ ಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರಿಗೆ ಇಲ್ಲಿ ನಡೆದ ಸಮಾರಂಭದಲ್ಲಿ 2025ರ ಕೆಐಎಸ್ಎಸ್ ಮಾನವೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸೋಮವಾರ ಇಲ್ಲಿ ಕೆಐಐಟಿ ಮತ್ತು ಕಿಐಎಸ್ಎಸ್ ಸಂಸ್ಥಾಪಕ ಅಚ್ಯುತ ಸಮಂತ ಅವರ ಸಮ್ಮುಖದಲ್ಲಿ ಶ್ರೀಲಂಕಾದ ನೊಬೆಲ್ ಪ್ರಶಸ್ತಿ ವಿಜೇತ ಪ್ರೊ. ಮೋಹನ್ ಮುನಸಿಂಘೆ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು ಎಂದು ಹೇಳಿಕೆ ತಿಳಿಸಿದೆ.

ಸಮಾರಂಭದಲ್ಲಿ ಬುಡಕಟ್ಟು ಸಮುದಾಯದ 40,000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರು ತಮ್ಮ ಸಾಂಪ್ರದಾಯಿಕ ನೃತ್ಯಗಳು ಮತ್ತು ಪ್ರಸ್ತುತಿಗಳೊಂದಿಗೆ ನೀತಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಈ ಪ್ರಶಸ್ತಿಯು ನೀತಾ ಅವರ ಅತ್ಯುತ್ತಮ ಮಾನವೀಯ ಉಪಕ್ರಮಗಳು ಮತ್ತು ರಿಲಯನ್ಸ್ ಫೌಂಡೇಶನ್ ಮೂಲಕ ಶಿಕ್ಷಣ, ಆರೋಗ್ಯ ರಕ್ಷಣೆ, ಗ್ರಾಮೀಣ ಪರಿವರ್ತನೆ, ಮಹಿಳಾ ಸಬಲೀಕರಣ ಮತ್ತು ಕ್ರೀಡಾ ಕ್ಷೇತ್ರಗಳ ಬೆಳವಣಿಗೆಗೆ ಶ್ರಮಿಸುವ ಮೂಲಕ ಸಾಮಾಜಿಕ ಅಭಿವೃದ್ಧಿಗೆ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಗುರುತಿಸುತ್ತದೆ ಎಂದು ಹೇಳಿಕೆ ತಿಳಿಸಿದೆ.

ಕೆಐಐಟಿ (ಕಳಿಂಗ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆ) ಮತ್ತು ಕೆಐಎಸ್ಎಸ್ (ಕಳಿಂಗ ಸಮಾಜ ವಿಜ್ಞಾನ ಸಂಸ್ಥೆ) ಸಂಸ್ಥೆಗಳು ದೇಶಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ನೀತಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.