ಮುಂಬೈ: ರಾಜ್ಯದಲ್ಲಿ ಕಾರ್ಪೊರೇಟ್ ಜಿಹಾದ್ ಹೊರಹೊಮ್ಮುತ್ತಿದೆ. ಈ ಜಿಹಾದಿ ಚಟುವಟಿಕೆಗಳನ್ನು ತಡೆಯಲು ಹಿಂದೂ ಅಭ್ಯರ್ಥಿಗಳನ್ನು ಮಾತ್ರ ನೇಮಿಸಿಕೊಳ್ಳಲು ಆದ್ಯತೆ ನೀಡುವುದು ಅಗತ್ಯ ಎಂದು ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ನಾರಾಯಣ ರಾಣೆ ಗುರುವಾರ ಹೇಳಿದರು.

ನಾಸಿಕ್ನಲ್ಲಿ ನಡೆದ ಟಿಸಿಎಸ್ ಪ್ರಕರಣವನ್ನು ಉಲ್ಲೇಖಿಸಿದ ರಾಣೆ, ಧಾರ್ಮಿಕ ಮತಾಂತರಕ್ಕೆ ಉದ್ಯೋಗಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ‘ವ್ಯಾಪಾರದಿಂದ ಹಿಡಿದು ಕಾರ್ಪೊರೇಟ್ ಕಚೇರಿಗಳವರೆಗೆ ಪ್ರತಿಯೊಂದು ವೇದಿಕೆಯಲ್ಲಿ ವಿವಿಧ ರೀತಿಯ ಜಿಹಾದ್ ಮೂಲಕ ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಜಿಹಾದಿ ಚಟುವಟಿಕೆಗಳನ್ನು ತಡೆಯಲು ಕಂಪನಿಗಳು ಶೀಘ್ರದಲ್ಲೇ ಹಿಂದೂಗಳನ್ನು ಮಾತ್ರ ನೇಮಿಸಿಕೊಳ್ಳುವ ನೀತಿಯನ್ನು ಅಳವಡಿಸಿಕೊಳ್ಳಬೇಕು. ಈ ಮೂಲಕ ಹಿಂದೂ ರಾಷ್ಟ್ರವನ್ನು ಬಲಪಡಿಸಲು ಹಿಂದೂ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದು ಅಗತ್ಯ’ ಎಂದು ಕರೆ ನೀಡಿದರು.

ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ನ ಬಿಪಿಒ ಘಟಕದಲ್ಲಿ ಬೆಳಕಿಗೆ ಬಂದಿರುವ ಧಾರ್ಮಿಕ ಮತಾಂತರ ಪ್ರಯತ್ನ ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ಎಂಟು ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರದಲ್ಲಿ ಏಳು ಮಂದಿ ಪುರುಷರು ಹಾಗೂ ಒಬ್ಬ ಮಹಿಳೆ ಇದ್ದಾರೆ. ಮತ್ತೊಬ್ಬ ಮಹಿಳಾ ಉದ್ಯೋಗಿ ತಲೆಮರೆಸಿಕೊಂಡಿದ್ದಾರೆ. ಉದ್ಯೋಗಿಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪದ ಬಗ್ಗೆ ತನಿಖೆ ನಡೆಸಲು ಸತ್ಯಶೋಧನಾ ಸಮಿತಿಯನ್ನು ರಚಿಸಲಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಬುಧವಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.