ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ನೂತನ ಸಚಿವರಿಗೆ ಖಾತೆ ಹಂಚಿಕೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಸಂಪುಟ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಗೃಹ ಮತ್ತು ಸಾಮಾನ್ಯ ಆಡಳಿತ ಖಾತೆಗಳನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ
Published 16 ಮಾರ್ಚ್ 2024, 13:52 IST
Last Updated 16 ಮಾರ್ಚ್ 2024, 13:52 IST
ಅಕ್ಷರ ಗಾತ್ರ

ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಸಂಪುಟ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಗೃಹ ಮತ್ತು ಸಾಮಾನ್ಯ ಆಡಳಿತ ಖಾತೆಗಳನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

ಉಪ ಮುಖ್ಯಮಂತ್ರಿ ಸಾಮ್ರಾಟ್‌ ಚೌಧರಿ ಅವರಿಗೆ ಹಣಕಾಸು ಮತ್ತು ವಾಣಿಜ್ಯ ತೆರಿಗೆ ಖಾತೆಗಳ ಉಸ್ತುವಾರಿ ವಹಿಸಿದ್ದರೆ, ಇನ್ನೋರ್ವ ಉಪ ಮುಖ್ಯಮಂತ್ರಿ ವಿಜಯ್‌ ಸಿನ್ಹಾ ಅವರಿಗೆ ರಸ್ತೆ ನಿರ್ಮಾಣ, ಗಣಿ, ಸಂಸ್ಕೃತಿ ಮತ್ತು ಯುವಜನ ಇಲಾಖೆಗಳ ಉಸ್ತುವಾರಿ ವಹಿಸಲಾಗಿದೆ.

ಸಂಪುಟ ಸಚಿವಾಲಯ ಇಲಾಖೆಯು ಶನಿವಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. 

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರವಷ್ಟೇ ಸಚಿವ ಸಂಪುಟ ವಿಸ್ತರಿಸಿದ್ದು, 21 ಮಂದಿಯನ್ನು ಸೇರ್ಪಡೆ ಮಾಡಿಕೊಂಡಿದ್ದರು. ಪ್ರಸ್ತುತ ಸಂಪುಟ ಸದಸ್ಯರ ಬಲ 30ಕ್ಕೇರಿದೆ. ಕಾಯ್ದೆಯನುಸಾರ ಇನ್ನೂ ಆರು ಜನರ ಸೇರ್ಪಡೆಗೆ ಅವಕಾಶವಿದೆ.

ಗೃಹ ಖಾತೆಯ ಜೊತೆಗೆ ಮುಖ್ಯಮಂತ್ರಿ ಅವರು ಸಂಪುಟ ಸಚಿವಾಲಯ, ಚುನಾವಣೆ, ಗುಪ್ತದಳ, ಸಾಮಾನ್ಯ ಆಡಳಿತ ಹಾಗೂ ಹಂಚಿಕೆಯಾಗದ ಇತರೆ ಎಲ್ಲ ಖಾತೆಗಳ ಉಸ್ತುವಾರಿ ವಹಿಸುವರು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT