ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಮರಳಲು ಸಿದ್ಧತೆ ನಡೆಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಯು ರಾಷ್ಟ್ರೀಯ ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ ಅವರು ಪಕ್ಷದ ಕೇಂದ್ರ ಕಚೇರಿಯಲ್ಲಿ ನಿತೀಶ್ ಅವರ ಪರವಾಗಿ ಗುರುವಾರ ನಾಮಪತ್ರ ಸಲ್ಲಿಸಿದರು.

ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಮಾರ್ಚ್ 22ರವರೆಗೂ ಕಾಲಾವಕಾಶ ಇದೆ. ವಾಪಸ್ ಪಡೆಯಲು 24 ಕೊನೆ ದಿನ. 23ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಎಂದು ಜೆಡಿಯು ರಾಷ್ಟ್ರೀಯ ವಕ್ತಾರ ರಾಜೀವ್ ರಂಜನ್ ಪ್ರಸಾದ್ ತಿಳಿಸಿದ್ದಾರೆ.

ನಿತೀಶ್ ಕುಮಾರ್ ಅವರನ್ನು ಹೊರತುಪಡಿಸಿ ಬೇರೆ ಯಾರೊಬ್ಬರೂ ಇದೂವರೆಗೂ ನಾಮಪತ್ರ ಸಲ್ಲಿಸದಿದ್ದರಿಂದ, ಬಿಹಾರ ಮುಖ್ಯಮಂತ್ರಿಯು ಪಕ್ಷದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಲಿದ್ದಾರೆ ಎಂದು ಜೆಡಿಯು ಮೂಲಗಳು ತಿಳಿಸಿವೆ.

ರಾಜೀವ್ ರಂಜನ್ ಸಿಂಗ್ ಅವರು 2024ರ ಲೋಕಸಭಾ ಚುನಾವಣೆಗೂ ಮುನ್ನ 2023ರ ಡಿಸೆಂಬರ್ನಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರಿಂದ, ನಿತೀಶ್ ಅವರು ಜೆಡಿಯು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.