ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರದ್‌ ಪವಾರ್‌ ಭೇಟಿ ಮಾಡಲಿರುವ ನಿತೀಶ್‌ ಕುಮಾರ್‌

Published 11 ಮೇ 2023, 4:00 IST
Last Updated 11 ಮೇ 2023, 4:00 IST
ಅಕ್ಷರ ಗಾತ್ರ

ಮುಂಬೈ: ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಭೇಟಿ ಮಾಡಿದ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಇಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ನಾಯಕ ಶರದ್ ಪವಾರ್‌ ಹಾಗೂ ಶಿವಸೇನಾ (ಉದ್ಧವ್‌ ಠಾಕ್ರೆ ಬಣ) ನಾಯಕ ಉದ್ಧವ್‌ ಠಾಕ್ರೆ ಅವರನ್ನು ಮುಂಬೈನಲ್ಲಿ ಭೇಟಿಯಾಗಲಿದ್ದಾರೆ.

ಮಂಗಳವಾರ ನವೀನ್ ಪಟ್ನಾಯಕ್ ಅವರನ್ನು ನಿತೀಶ್‌ಕುಮಾರ್‌ ಭೇಟಿಯಾಗಿದ್ದರು. ಉಭಯ ನಾಯಕರು ಲೋಕಸಭಾ ಚುನಾವಣೆಯ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

‘ಮೊದಲು ಉದ್ಧವ್‌ ಠಾಕ್ರೆಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ತದನಂತರ ಶರದ್‌ ಪವಾರ್‌ ಅವರನ್ನು ಭೇಟಿಯಾಗಲಿದ್ದಾರೆ‘ ಎಂದು ಜನತಾದಳ (ಸಂಯುಕ್ತ) ಎಂಎಲ್‌ಸಿ ಕಪಿಲ್‌ ಪಾಟೀಲ್‌ ತಿಳಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯಲು ವಿರೋಧ ಪಕ್ಷಗಳ ಒಗ್ಗೂಡಿಕೆ ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ನಿತೀಶ್‌ ಕುಮಾರ್ ವಿರೋಧ ಪಕ್ಷದ ನಾಯಕರುಗಳನ್ನು ಭೇಟಿಯಾಗುತ್ತಿದ್ದಾರೆ. ಮಮತಾ ಬ್ಯಾನರ್ಜಿ ಕೂಡ ನಿತೀಶ್‌ ಕುಮಾರ್‌ ಹಾದಿಯಲ್ಲಿಯೇ ವಿರೋಧ ಪಕ್ಷದ ಒಗ್ಗೂಡಿಕೆ ಪ್ರಯತ್ನಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT