ನವದೆಹಲಿ: ಈ ವರ್ಷದ ಕೊನೆಯಲ್ಲಿ ನಡೆಯುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿದೆ. ಈ ನಡುವೆ ನಿತೀಶ್ ಕುಮಾರ್ ಅವರು ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಸಚಿವ ಹಾಗೂ ಎಲ್ಜೆಪಿ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪಾಸ್ವಾನ್, ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಪ್ರತಿಪಕ್ಷಗಳು ಟೀಕಿಸುತ್ತಿರುವುದನ್ನು ಬಲವಾಗಿ ಖಂಡಿಸಿದ್ದಾರೆ.
.ನಟ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರ ಶೀಘ್ರ ತೆರೆಗೆ.Su From So:ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸುವೃಷ್ಟಿ; ಹೊಸಬರು ಸೃಷ್ಟಿಸಿದ ಸೋಜಿಗ.
ಪ್ರಧಾನಿಯವರ ಮೇಲೆ ಪ್ರೀತಿ ಇದೆ ಎಂದು ಹಲವಾರು ಬಾರಿ ಪುನರುಚ್ಚರಿಸಿದ್ದೇನೆ. ಬಿಹಾರದಲ್ಲಿ ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಚುನಾವಣೆಗಳು ನಡೆಯಲಿವೆ. ಚುನಾವಣಾ ಫಲಿತಾಂಶಗಳ ನಂತರವೂ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಾಸ್ವಾನ್ ತಿಳಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಪ್ರತಿಕ್ರಿಯಿಸಿರುವ ಪಾಸ್ವಾನ್, ಈ ಪ್ರಕ್ರಿಯೆಯು ಹಿಂದೆ ನಾಲ್ಕು ಬಾರಿ ನಡೆದಿದ್ದು, ಇದರಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿದ್ದಾರೆ.
.ಗಾಂಧಿ ಬಜಾರ್: ಪಾರ್ಕಿಂಗ್ ಸಮಸ್ಯೆಗೆ ಸಿಗಲಿದೆ ಮುಕ್ತಿ.ಆ. 22ಕ್ಕೆ ಶೈನ್ ಶೆಟ್ಟಿ, ಅಂಕಿತಾ ನಟನೆಯ ‘ಜಸ್ಟ್ ಮ್ಯಾರೀಡ್’ ಸಿನಿಮಾ ರಿಲೀಸ್.
ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯನ್ನು ಪರಿಶೀಲಿಸಲು ಬಿಹಾರಕ್ಕೆ ಸತ್ಯಶೋಧನಾ ಸಮಿತಿಯನ್ನು ಕಳುಹಿಸುವ ಸಂಬಂಧ ಆರ್ಜೆಡಿ ಸಂಸದ ಮನೋಜ್ ಝಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪಾಸ್ವಾನ್, ನಾನು ಬಿಹಾರಿ, ನನ್ನ ರಾಜ್ಯದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸಮಿತಿಯನ್ನು ಕಳುಹಿಸಬೇಕಾಗಿಲ್ಲ. ನನಗೆ ಪರಿಸ್ಥಿತಿ ತಿಳಿದಿದೆ ಎಂದು ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯಬೇಕೆಂದು ಪತ್ರಿಪಕ್ಷಗಳು ಒತ್ತಾಯಿಸಿದ್ದರು. ಅಧಿವೇಶನ ಕರೆದಾಗ ಪ್ರತಿಪಕ್ಷಗಳು ಗದ್ದಲ ಸೃಷ್ಟಿಸಿದ್ದವು ಎಂದು ಪಾಸ್ವಾನ್ ಟೀಕಿಸಿದ್ದಾರೆ.
.BMTC: ಅಂಧರಿಗೆ ಬಿಎಂಟಿಸಿಯಲ್ಲೂ ಬೇಕು ‘ಶೂನ್ಯ’ ಟಿಕೆಟ್.ಸರ್ಕಾರ–ವಿಪಕ್ಷ ಸಿಂಧೂರ ಸಂಘರ್ಷ: ಲೋಪದ ಹೊಣೆ ಹೊತ್ತುಕೊಳ್ಳಲು ಅಮಿತ್ ಶಾಗೆ ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.