ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ 4,000ಕ್ಕಿಂತ ಹೆಚ್ಚು ಸ್ಥಾನ: ಟ್ರೋಲ್ ಆದ ನಿತೀಶ್

Published 7 ಏಪ್ರಿಲ್ 2024, 16:12 IST
Last Updated 7 ಏಪ್ರಿಲ್ 2024, 16:12 IST
ಅಕ್ಷರ ಗಾತ್ರ

ಪಟ್ನಾ: ಎನ್‌ಡಿಎ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ 4,000 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಹೇಳುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೊಳಗಾಗಿದ್ದಾರೆ.

ಜೆಡಿಯು ಮುಖ್ಯಸ್ಥರಾದ ನಿತೀಶ್ ಮೂರು ತಿಂಗಳ ಹಿಂದೆಯಷ್ಟೇ ಎನ್‌ಡಿಎಗೆ ಮರಳಿದ್ದರು. ನವಾಡ ಜಿಲ್ಲೆಯ ರ್‍ಯಾಲಿಯಲ್ಲಿ ಭಾಗವಹಿಸಿದ್ದ ಅವರು ಮುಜುಗರಕ್ಕೀಡಾಗುವ ಹೇಳಿಕೆ ನೀಡಿದರು.

ನಿತೀಶ್ ತೊದಲುತ್ತಾ, ‘ಚಾರ್ ಲಾಕ್’ (ನಾಲ್ಕು ಲಕ್ಷ) ಎಂದು ಹೇಳಿ ನಂತರ ತಮ್ಮನ್ನು ತಾವೇ ಸರಿಪಡಿಸಿಕೊಂಡು, ಪ್ರಧಾನಿ ನರೇಂದ್ರ ಮೋದಿ ಅವರ ಕಡೆ ನೋಡುತ್ತಾ, ‘ಚಾರ್ ಹಜಾರ್‌ ಸೆ ಭಿ ಜ್ಯಾದಾ’ (ನಾಲ್ಕು ಸಾವಿರಕ್ಕೂ ಹೆಚ್ಚು) ಎಂದು ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬಿಹಾರದ ದೀರ್ಘ ಕಾಲದ ಮುಖ್ಯಮಂತ್ರಿ ಎನಿಸಿಕೊಂಡಿರುವ ನಿತೀಶ್ ಕುಮಾರ್, ಬಾಯಿತಪ್ಪಿ ಆಡುವ ಮಾತುಗಳಿಂದ ಪದೇ ಪದೇ ಮುಜುಗರಕ್ಕೀಡಾಗುತ್ತಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಮೋದಿ ಹೇಳುತ್ತಾ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT