ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯ ಪಿ.ಜಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪಡೆಯುವಂತೆ ಒತ್ತಾಯಿಸುವಂತಿಲ್ಲ: NMC

ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಎಚ್ಚರಿಕೆ
Published 10 ಫೆಬ್ರುವರಿ 2024, 13:30 IST
Last Updated 10 ಫೆಬ್ರುವರಿ 2024, 13:30 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕಾಲೇಜುಗಳು ಮತ್ತು ಸಂಸ್ಥೆಗಳು ತಾವು ನೀಡುವ ಹಾಸ್ಟೆಲ್‌ಗಳಲ್ಲಿ ಉಳಿಯಲು ಒತ್ತಾಯಿಸುವುದು ಮತ್ತು ಹಾಸ್ಟೆಲ್‌ ಸೌಲಭ್ಯಕ್ಕೆ ಭಾರಿ ಮೊತ್ತದ ಶುಲ್ಕ ವಿಧಿಸುವುದರ ವಿರುದ್ಧ ಎಚ್ಚರಿಕೆ ನೀಡಿದೆ. 

ವೈದ್ಯಕೀಯ ಕಾಲೇಜುಗಳು ಅಥವಾ ಸಂಸ್ಥೆಗಳು ತಾವು ನೀಡುವ ಹಾಸ್ಟೆಲ್‌ಗಳಲ್ಲಿ ಉಳಿಯಲು ಒತ್ತಾಯಿಸುತ್ತಿರುವ ಮತ್ತು ಹಾಸ್ಟೆಲ್‌ ಸೌಲಭ್ಯದ ಹೆಸರಿನಲ್ಲಿ ‌ಭಾರಿ ಮೊತ್ತ ವಿಧಿಸುತ್ತಿರುವ ಬಗ್ಗೆ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಹಲವಾರು ದೂರುಗಳು ಬಂದಿವೆ. ಈ ನಿರ್ದೇಶನ ಪಾಲಿಸದ ವೈದ್ಯಕೀಯ ಕಾಲೇಜುಗಳು ದಂಡ, ಸೀಟು ಕಡಿತ ಮತ್ತು ಪ್ರವೇಶ ಸ್ಥಗಿತದಂತಹ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಫೆಬ್ರುವರಿ 8ರಂದು ಹೊರಡಿಸಲಾದ ಸುತ್ತೋಲೆಯಲ್ಲಿ, ಆಯೋಗವು ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ನಿಯಂತ್ರಣ (ಪಿಜಿಎಂಇಆರ್‌) 2023ರ ನಿಯಮಗಳನ್ನು ಉಲ್ಲೇಖಿಸಿ, ‘ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಾಲೇಜು ಸೂಕ್ತ ವಸತಿ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ. ಆದರೆ, ಪಿ.ಜಿ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಇರುವುದನ್ನು ಕಡ್ಡಾಯಗೊಳಿಸಿಲ್ಲ’ ಎಂದು ಎನ್‌ಎಂಸಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT