ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಅಪರಾಧ ಕೃತ್ಯ: ಸಿಬಿಐ ತನಿಖೆ ಆರಂಭ, ಇದುವರೆಗೆ ಯಾರನ್ನೂ ಬಂಧಿಸಿಲ್ಲ

Published 28 ಜುಲೈ 2023, 15:42 IST
Last Updated 28 ಜುಲೈ 2023, 15:42 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರದಲ್ಲಿ ನಡೆದಿರುವ ಆರು ವಿವಿಧ ಅಪರಾಧ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ಸಿಬಿಐ, ಈ ಸಂಬಂಧ  ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಆರು ಕೃತ್ಯಗಳಿಗೆ ಸಂಬಂಧಿಸಿ ಕೇಂದ್ರ ತನಿಖಾ ಸಂಸ್ಥೆಯು ಮಣಿಪುರದ ಪೊಲೀಸರಿಂದ ಎಫ್‌ಐಆರ್ ಪಡೆದುಕೊಂಡಿದೆ. ಈ ಸಂಬಂಧ ಪುನಃ ಮೊಕದ್ದಮೆ ದಾಖಲಿಸಿದ ತಿಂಗಳ ನಂತರವೂ ಪ್ರಕರಣದ ಸೂಕ್ಷ್ಮತೆ ಹಿನ್ನೆಲೆಯಲ್ಲಿ ಎಫ್ಐಆರ್‌ ಅನ್ನು ಸಿಬಿಐ ಬಹಿರಂಗಪಡಿಸಿಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಉಲ್ಲೇಖಿಸಿರುವ ಆರು ಪ್ರಕರಣಗಳ ತನಿಖೆಗಾಗಿ ಡಿಐಜಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಸಿಬಿಐ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಕಠಿಣ ಪರಿಸ್ಥಿತಿಯಲ್ಲಿ ತಂಡವು ತನಿಖೆಯನ್ನು ಕೈಗೊಂಡಿದೆ. ಪ್ರತಿಭಟನನಿರತ ಗುಂಪುಗಳ ಪ್ರತಿರೋಧ, ಅಡ್ಡಿ  ಎದುರಾಗುತ್ತಿದೆ. ಸಾಕ್ಷಿಗಳನ್ನು ಗುರುತಿಸುವುದು ಕಷ್ಟವಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT