ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠಿಯ ಜೊತೆ ಅನ್ಯಭಾಷೆಯ ನಾಮಫಲಕಕ್ಕೆ ನಿರ್ಬಂಧ ಇಲ್ಲ: ಬಾಂಬೆ ಹೈಕೋರ್ಟ್‌

Published 12 ಏಪ್ರಿಲ್ 2024, 14:02 IST
Last Updated 12 ಏಪ್ರಿಲ್ 2024, 14:02 IST
ಅಕ್ಷರ ಗಾತ್ರ

ಮುಂಬೈ: ಮುನಿಸಿಪಲ್ ಕೌನ್ಸಿಲ್‌ಗಳಲ್ಲಿ ಮಹಾರಾಷ್ಟ್ರದ ಆಡಳಿತ ಭಾಷೆಯಾದ ಮರಾಠಿಯ ಜೊತೆ ಬೇರೆ ಭಾಷೆಗಳಲ್ಲಿಯೂ ನಾಮಫಲಕ ಅಳವಡಿಸುವುದಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಹೇಳಿದೆ.

ಪಾತೂರ್ ಮುನಿಸಿಪಲ್ ಕೌನ್ಸಿಲ್‌ನಲ್ಲಿ ಮರಾಠಿ ಮತ್ತು ಉರ್ದು ಭಾಷೆಗಳಲ್ಲಿ ನಾಮಫಲಕ ಅಳವಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅವಿನಾಶ್ ಘರೋಟೆ ಮತ್ತು ಎಂ.ಎಸ್. ಜಾವಲಕರ್ ಅವರು ಇದ್ದ ವಿಭಾಗೀಯ ಪೀಠವು ಈ ಮಾತು ಹೇಳಿದೆ.

ಉರ್ದುವಿನಲ್ಲಿ ನಾಮಫಲಕ ಅಳವಡಿಸಿದ್ದಕ್ಕಾಗಿ ತಕ್ಷಣ ಕ್ರಮ ಜರುಗಿಸುವಂತೆ ಅಕೋಲಾ ಜಿಲ್ಲಾ ಮರಾಠಿ ಭಾಷಾ ಸಮಿತಿಯ ಅಧ್ಯಕ್ಷರಿಗೆ ಸೂಚಿಸಬೇಕು ಎಂದು ವರ್ಷಾ ಬಾಗಡೆ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಕೋರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT