ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆಕಂಡು ಬಂದಿಲ್ಲ. ಮಂಗಳವಾರವೂ ವೆಂಟಿಲೇಟರ್ ನೆರವಿನೊಂದಿಗೆ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇಲ್ಲಿನ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದುಆಸ್ಪತ್ರೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
84 ವರ್ಷದ ಮುಖರ್ಜಿ ಅವರ ಮಿದುಳಿನಲ್ಲಿ ರಕ್ತಹೆಪ್ಪುಗಟ್ಟಿದ್ದ ಕಾರಣ ಇದೇ ಆಸ್ಪತ್ರೆಯಲ್ಲಿ ಅವರಿಗೆ ತುರ್ತುಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದಾದ ಬಳಿಕವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಶಸ್ತ್ರಚಿಕಿತ್ಸೆಗೂ ಮುನ್ನ, ಅವರಿಗೆ ಕೋವಿಡ್–19 ಇರುವುದು ದೃಢಪಟ್ಟಿತ್ತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.