ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಣವ್‌ ಮುಖರ್ಜಿ ಆರೋಗ್ಯದಲ್ಲಿ ಸುಧಾರಣೆ ಇಲ್ಲ

Last Updated 23 ಆಗಸ್ಟ್ 2020, 7:47 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ಸುಧಾರಣೆ ಕಂಡುಬಂದಿಲ್ಲ. ಅವರಿಗೆ ವೆಂಟಿಲೇಟರ್‌ ವ್ಯವಸ್ಥೆಯನ್ನು ಮುಂದುವರಿಸಲಾಗಿದೆ ಎಂದು ಸೇನೆಯ ‘ರಿಸರ್ಚ್‌ ಆ್ಯಂಡ್‌ ರೆಫೆರಲ್’ ಆಸ್ಪತ್ರೆ ಭಾನುವಾರ ತಿಳಿಸಿದೆ.

ಪ್ರಣವ್‌ ಮುಖರ್ಜಿ ಇನ್ನೂ ಕೋಮದಲ್ಲಿ ಇದ್ದಾರೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ತಿಂಗಳ 10ರಂದು ಸೇನೆಯ ರಿಸರ್ಚ್‌ ಆ್ಯಂಡ್‌ ರೆಫೆರಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿದೆ. ಕೊರೊನಾ ಸೋಂಕು ಧೃಡಪಟ್ಟ ಬಳಿಕ ಅವರಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT