ನವದೆಹಲಿ: ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿಲ್ಲಎಂದುಕೋರ್ಟ್ ಸ್ಪಷ್ಟನೆ ನೀಡಿದೆ.

ನ್ಯಾಯಾಂಗದ ಕುರಿತು ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ರಾಜ್‌ದೀಪ್ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿದೆ ಎಂದು ಮಂಗಳವಾರ ಮಾಧ್ಯಮಗಳು ವರದಿ ಮಾಡಿದ್ದವು. ಹಾಗೂ ಪ್ರಕರಣ ದಾಖಲಿಸಿಕೊಂಡಿರುವ ಬಗ್ಗೆಯೂ ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಮಾಹಿತಿಪ್ರಕಟವಾಗಿತ್ತು.

ಇದನ್ನೂ ಓದಿ:ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ

ಈ ಕುರಿತಂತೆ ಮಂಗಳವಾರ ತಡರಾತ್ರಿ ಸ್ಪಷ್ಟನೆ ನೀಡಿರುವ ಸುಪ್ರೀಂ ಕೋರ್ಟ್ ‘ರಾಜ್‌ದೀಪ್ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿರುವಂತೆಕೋರ್ಟ್ ವೆಬ್‌ಸೈಟ್‌ನಲ್ಲಿ ತಪ್ಪಾಗಿ ತೋರಿಸಿದೆ. ಅವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ದೂರು ದಾಖಲಿಸಿಲ್ಲ ಎಂದು ಸುಪ್ರೀಂ ಕೋರ್ಟ್’ ಹೇಳಿದೆ.

ಕೋರ್ಟ್ ವೆಬ್‌ಸೈಟ್‌ನಲ್ಲಿ ಆಗಿರುವ ಪ್ರಮಾದವನ್ನು ಸರಿಪಡಿಸಲು ಸೂಕ್ತಕ್ರಮಗಳನ್ನು ಕೈಗೊಳ್ಳುವುದಾಗಿ ಕೋರ್ಟಿನ ಉಪ ರಿಜಿಸ್ಟಾರ್ ರಾಕೇಶ್ ಶರ್ಮಾ ಹೇಳಿದ್ದಾರೆ.

ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ಅವರು ತಪ್ಪಿತಸ್ಥರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ರಾಜ್‌ದೀಪ್ ಸರ್‌ದೇಸಾಯಿ ಮಾಡಿದ ಟ್ವೀಟ್‌ಗಳು ಅವರಿಗೆ ಸಮಸ್ಯಾತ್ಮಕವಾಗಿ ಪರಿಣಮಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.