ಕೊಚ್ಚಿ: ಕೇರಳ ಪ್ರದೇಶ ಕಾಂಗ್ರೆಸ್ ಘಟಕದ ನಾಯಕತ್ವದಲ್ಲಿ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಗುರುವಾರ ಹೇಳಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಅವರನ್ನು ಬದಲಿಸುವ ಕುರಿತೂ ಯಾವುದೇ ಚರ್ಚೆಗಳು ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
.ಶಶಿ ತರೂರ್ ಪರ ಕೇರಳ ಕಾಂಗ್ರೆಸ್ ನಾಯಕರ ಮೃದು ಧೋರಣೆ.ಬಿಜೆಪಿಯ ಪಿಯೂಷ್ ಗೋಯಲ್ ಜೊತೆ ಶಶಿ ತರೂರ್ ನಗು ನಗುತ್ತಾ ಸೆಲ್ಫಿ! ಏನಿದರ ಮರ್ಮ?.
‘2026ರಲ್ಲಿ ಚುನಾವಣೆ ನಡೆಯಲಿರುವ ಕೇರಳ, ಬಿಹಾರ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನ ಪಕ್ಷದ ಘಟಕಗಳ ಮುಖಂಡರನ್ನು ದೆಹಲಿಗೆ ಬರುವಂತೆ ಸೂಚಿಸಲಾಗಿತ್ತು. ಆದರೆ ಮಾಧ್ಯಮಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ನಡೆದಿದೆ ಎಂದು ತಪ್ಪಾಗಿ ಹೇಳಲಾಗಿದೆ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದಿದ್ದಾರೆ.

‘ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರವನ್ನು ಎಐಸಿಸಿ ತೆಗೆದುಕೊಳ್ಳಲಿದೆ. ದೆಹಲಿಯಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ’ ಎಂದು ಸತೀಶನ್ ಸ್ಪಷ್ಟಪಡಿಸಿದ್ದಾರೆ.

ಪಕ್ಷದ ಪುನರ್ ರಚನೆ ಕುರಿತು ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಸುಧಾಕರನ್ ಹೇಳಿಕೆಯನ್ನು ಪಕ್ಷದ ಕಾರ್ಯಕಾರಿ ಮಂಡಳಿ ಸದಸ್ಯರೂ ಆಗಿರುವ ಸಂಸದ ಶಶಿ ತರೂರ್ ಅವರು ಬೆಂಬಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸತೀಶನ್ ಈ ಹೇಳಿಕೆ ನೀಡಿದ್ದಾರೆ.
.ಕೇರಳದ ಸ್ಟಾರ್ಟ್ಅಪ್ ಪ್ರಗತಿಯನ್ನಷ್ಟೇ ಶ್ಲಾಘಿಸಿದ್ದೇನೆ: ತರೂರ್ ಸ್ಪಷ್ಟನೆ.ಭಾರತದಲ್ಲೇ ಅತಿ ಹೆಚ್ಚು ನಿರುದ್ಯೋಗಿಗಳು: ಶಶಿ ತರೂರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.