ನವದೆಹಲಿ (ಪಿಟಿಐ): ‘ಲೋಕಸಭೆ ಮಾಜಿ ಸದಸ್ಯ, ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್, ಆತನ ಸಹೋದರ ಅಶ್ರಫ್‌ನ ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವಿಲ್ಲ’ ಎಂದು ಉತ್ತರ ಪ್ರದೇಶದ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಪ್ರಯಾಗ್‌ರಾಜ್‌ನಲ್ಲಿ ಏ.15ರಂದು ವೈದ್ಯಕೀಯ ಪರೀಕ್ಷೆಗೆ ಇಬ್ಬರನ್ನು ಕರೆದೊಯ್ಯುವಾಗ ಹತ್ಯೆ ನಡೆದಿತ್ತು. ಸುಪ್ರೀಂಕೋರ್ಟ್‌ಗೆ ವಸ್ತುಸ್ಥಿತಿ ವರದಿ ಸಲ್ಲಿಸಿರುವ ಸರ್ಕಾರ, ಅರ್ಜಿದಾರರ ಆಕ್ಷೇಪಗಳ ಹಿನ್ನೆಲೆಯಲ್ಲಿ ಘಟನೆ ಕುರಿತು ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗಿದೆ ಎಂದು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.