ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೀಟುಹಂಚಿಕೆ; ಕಾಂಗ್ರೆಸ್‌– ಶಿವಸೇನಾ (ಯುಬಿಟಿ) ಮಧ್ಯೆ ಮೂಡದ ಒಮ್ಮತ

Published 10 ಫೆಬ್ರುವರಿ 2024, 18:00 IST
Last Updated 10 ಫೆಬ್ರುವರಿ 2024, 18:00 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮಹಾರಾಷ್ಟ್ರದ ಮಹಾವಿಕಾಸ ಅಘಾಡಿ (ಎಂವಿಎ) ಮೈತ್ರಿಕೂಟ ನಡೆಸುತ್ತಿರುವ ಲೋಕಸಭೆ ಚುನಾವಣೆ ಸೀಟುಹಂಚಿಕೆ ಮಾತುಕತೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಮುಂಬೈ ಸೇರಿ ರಾಜ್ಯದ ಕೆಲ ಲೋಕಸಭಾ ಕ್ಷೇತ್ರಗಳಿಗಾಗಿ ಎಂವಿಎ ಮಿತ್ರಪಕ್ಷಗಳಾದ ಕಾಂಗ್ರೆಸ್‌ ಮತ್ತು ಯುಬಿಟಿ ಪಟ್ಟುಹಿಡಿದಿವೆ. ಹೀಗಾಗಿ ಮಾತುಕತೆ ಫಲಪ್ರದವಾಗಿಲ್ಲ ಎನ್ನಲಾಗಿದೆ.

ಮಹಾರಾಷ್ಟ್ರ ಕಾಂಗ್ರೆಸ್‌ ಉಸ್ತುವಾರಿ ರಮೇಶ್‌ ಚಿನ್ನಿಥಲಾ ಮತ್ತು ಪಕ್ಷದ ಇತರ ನಾಯಕರು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಶಿವಸೇನಾ (ಯುಬಿಟಿ) ನಾಯಕರಾದ ಆದಿತ್ಯ ಠಾಕ್ರೆ ಮತ್ತು ಸಂಜಯ್‌ ರಾವುತ್‌ ಅವರೂ ಸಭೆಯಲ್ಲಿ ಹಾಜರಿದ್ದರು. ಸಭೆಯಲ್ಲಿ ಯಾವುದೇ ನಿರ್ಣಯಕ್ಕೆ ಬರಲಾಗಿಲ್ಲ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT