ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾಷಣಕ್ಕಾಗಿ ಲಂಚ | ಜನಪ್ರತಿನಿಧಿಗಳಿಗೆ ಶಿಕ್ಷೆ ವಿನಾಯಿತಿ ಇಲ್ಲ: ಸುಪ್ರೀಂ ಕೋರ್ಟ್

Published 4 ಮಾರ್ಚ್ 2024, 6:26 IST
Last Updated 4 ಮಾರ್ಚ್ 2024, 6:26 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಜನಪ್ರತಿನಿಧಿಗಳಿಗೆ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಏಳು ಮಂದಿ ಇದ್ದ ಸಾಂವಿಧಾನಿಕ ಪೀಠವು, 1998ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಪಂಚ ಸದಸ್ಯ ಪೀಠ ನೀಡಿದ್ದ ತೀರ್ಪನ್ನು ಸರ್ವಾನುಮತದಿಂದ ರದ್ದು ಮಾಡಿತು.

ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಶಾಸಕರಿಗೆ ಆ ತೀರ್ಪಿನಲ್ಲಿ ಕಾನೂನು ಕ್ರಮದಿಂದ ವಿನಾಯಿತಿ ನೀಡಲಾಗಿತ್ತು.

ಲಂಚಕ್ಕೆ ಸಂಸದೀಯ ಸವಲತ್ತುಗಳಿಂದ ರಕ್ಷಣೆ ನೀಡಲಾಗುವುದಿಲ್ಲ. 1998ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ತೀರ್ಪು ಪ್ರಕಟಿಸುವ ವೇಳೆ ಸಿಜೆಐ ನುಡಿದರು.

ಲಂಚವು ಸಾರ್ವಜನಿಕ ಜೀವನದಲ್ಲಿ ನಿಷ್ಠೆಯನ್ನು ನಾಶಪಡಿಸುವುದರಿಂದ, ಈ ವಿಧಿಗಳಡಿ ವಿನಾಯಿತಿ ಹೊಂದಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT