ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಸ್ಥಾನ: ಪರೀಕ್ಷೆಯಲ್ಲಿ ನಕಲು ತಡೆಗೆ ಕ್ರಮ, ಹಲವೆಡೆ ಇಂಟರ್ನೆಟ್‌ ಸೇವೆ ಸ್ಥಗಿತ

Last Updated 26 ಸೆಪ್ಟೆಂಬರ್ 2021, 1:24 IST
ಅಕ್ಷರ ಗಾತ್ರ

ಜೈಪುರ: ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ರಾಜಸ್ಥಾನದಲ್ಲಿ ಇಂದು (ಭಾನುವಾರ) ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಪರೀಕ್ಷೆಯಲ್ಲಿ ನಕಲು ತಡೆಯುವ ನಿಟ್ಟಿನಲ್ಲಿ ಐದು ಜಿಲ್ಲೆಗಳಲ್ಲಿ ಸತತ 12 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್‌ ಮತ್ತು ಎಸ್ಎಂಎಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಪರೀಕ್ಷೆಯಲ್ಲಿ ವಂಚನೆ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

16 ಲಕ್ಷ ಅಭ್ಯರ್ಥಿಗಳು ರಾಜಸ್ಥಾನ -ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (REET) ಎದುರಿಸಲಿದ್ದಾರೆ. ಒಟ್ಟು 31 ಸಾವಿರ ಹುದ್ದೆಗಳಿಗೆ ಶಿಕ್ಷಕರನ್ನು ನೇಮಕ ಮಾಡಲು ಪರೀಕ್ಷೆ ನಡೆಸಲಾಗುತ್ತಿದೆ.

ಅಜ್ಮೀರ್‌, ದೌಸಾ, ಅಲ್ವಾರ್‌, ಜೈಪುರ ಹಾಗೂ ಜುಂಜುನು ಜಿಲ್ಲೆಗಳಲ್ಲಿ ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ. ಜತೆಗೆ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.

ಪರೀಕ್ಷಾ ದೃಷ್ಟಿಯಿಂದ ಕೋವಿಡ್‌ ಮಾರ್ಗಸೂಚಿ ಅನುಗುಣವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಭ್ಯರ್ಥಿಗಳಿಗೆ ಉಚಿತ ಬಸ್‌ ಹಾಗೂ ವಿಶೇಷ ರೈಲು ಸೇವೆಯನ್ನು ಸರ್ಕಾರ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT