‘ಬೆಳಗಾವಿಯಿಂದ ಧಾರವಾಡವರೆಗೆ 73 ಕಿ.ಮೀ. ಉದ್ದದ ರೈಲು ಮಾರ್ಗವನ್ನು 50:50 ಪಾಲುದಾರಿಕೆಯಲ್ಲಿ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ. ಕರ್ನಾಟಕ ಸರ್ಕಾರ ಹಾಗೂ ರೈಲ್ವೆ ಯೋಜನಾ ವೆಚ್ಚದಲ್ಲಿ ತಲಾ ಶೇ 50 ಭರಿಸಬೇಕು. ಇದಕ್ಕೆ ಅಗತ್ಯವಿರುವ ಜಮೀನಿನನ್ನು ಕರ್ನಾಟಕ ಸರ್ಕಾರ ಉಚಿತವಾಗಿ ನೀಡಬೇಕಿದೆ’ ಎಂದು ಅವರು ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.