ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣ | ಸಿಎಂ ಆಗಿ ನಿತೀಶ್ ಕುಮಾರ್ ವಿಫಲ: ಲಾಲು ಕಿಡಿ

Published : 19 ಸೆಪ್ಟೆಂಬರ್ 2024, 10:37 IST
Last Updated : 19 ಸೆಪ್ಟೆಂಬರ್ 2024, 10:37 IST
ಫಾಲೋ ಮಾಡಿ
Comments

ನವದೆಹಲಿ: ನವಾಡದಲ್ಲಿ ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಡಿಎ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿರುವ ಆರ್‌ಜೆಡಿ ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್, ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ವಿಫಲರಾಗಿದ್ದಾರೆ ಎಂದು ಗುರುವಾರ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಜನರನ್ನು ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿರುವುದಾಗಿ ತಿರುಗೇಟು ನೀಡಿದ್ದಾರೆ.

‘ಈ ಘಟನೆಯಲ್ಲಿ ಬಂಧಿತರಾಗಿರುವ ಶೇ. 90ರಷ್ಟು ಜನರು ಒಂದೇ ಸಮುದಾಯದವರು ಮತ್ತು ಆರ್‌ಜೆಡಿ ಬೆಂಬಲಿಗರು’ ಎಂದು ಮಾಂಝಿ ಹೇಳಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದ್ದು, ಶಂಕಿತರನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವಾಡ ಜಿಲ್ಲೆಯ ಮಾಂಝಿ ಟೋಲಾದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 21 ಮನೆಗಳಿಗೆ ಬೆಂಕಿ ಹಚ್ಚಿದ್ದು, ಕೆಲವು ಮನೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT