ನವದೆಹಲಿ: ಕೋವಿಡ್–19 ದೃಢಪಟ್ಟಿರುವ ಎಲ್ಲ ರೋಗಿಗಳೂ ಕಡ್ಡಾಯವಾಗಿ ಐದು ದಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಹೊರಡಿಸಿರುವ ಆದೇಶ ರದ್ದುಗೊಳಿಸಲಾಗಿದೆ.

ಶುಕ್ರವಾರ ಈ ಆದೇಶವನ್ನು ಬೈಜಲ್ ಹೊರಡಿಸಿದ್ದರು. ಈ ನಡೆಗೆ ಎಎಪಿ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಬೈಜಲ್ ಅವರ ಜೊತೆ ಎರಡು ಸುತ್ತಿನ ಸಭೆಯನ್ನು ಸರ್ಕಾರ ನಡೆಸಿತ್ತು. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಆದೇಶದಿಂದ ಈಗಿರುವ ವ್ಯವಸ್ಥೆಯ ಮೇಲೆ ಮತ್ತಷ್ಟು ಹೊರೆಯಾಗಲಿದೆ ಎಂದು ಸರ್ಕಾರ ಅಭಿಪ್ರಾಯ ವ್ಯಕ್ತಪಡಿಸಿತು.

ಮುಂದಿನ ದಿನಗಳಲ್ಲಿ ಕೋವಿಡ್–19 ದೃಢಪಟ್ಟ ರೋಗಿಯನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಅಥವಾ ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿ(ಹೋಂ ಐಸೊಲೇಷನ್) ಇರಲು ಸೂಚಿಸಬಹುದೇ ಎಂದು ನಿರ್ಧರಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.