ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಯಿಖಾನೆ ‘ಇಐಎ’ ವ್ಯಾಪ್ತಿಯಡಿ ತರಬೇಕಿಲ್ಲ: ಕೇಂದ್ರ

Published 18 ಮಾರ್ಚ್ 2024, 16:27 IST
Last Updated 18 ಮಾರ್ಚ್ 2024, 16:27 IST
ಅಕ್ಷರ ಗಾತ್ರ

ನವದೆಹಲಿ: ಕಸಾಯಿಖಾನೆ ಮತ್ತು ಮಾಂಸ ಸಂಸ್ಕರಣಾ ಘಟಕಗಳನ್ನು 2006ರ ಪರಿಸರ ಪ್ರಭಾವ ಮೌಲ್ಯಮಾಪನ (ಇಐಎ) ಅಧಿಸೂಚನೆ ವ್ಯಾಪ್ತಿಯಲ್ಲಿ ತರುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರವು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‌ಜಿಟಿ) ತಿಳಿಸಿದೆ.

ಕಸಾಯಿಖಾನೆಗಳಿಂದ ಪರಿಸರಕ್ಕೆ ಆಗುವ ಹಾನಿಯನ್ನು ತಡೆಗಟ್ಟಲು ಬೇಕಾದ ಮಾರ್ಗಸೂಚಿಗಳು ಈಗಾಗಲೇ ಜಾರಿಯಲ್ಲಿವೆ ಎಂದು ಸರ್ಕಾರ ಹೇಳಿದೆ.

ಕಸಾಯಿಖಾನೆಗಳು ಹಾಗೂ ಮಾಂಸ ಸಂಸ್ಕರಣಾ ಘಟಕಗಳನ್ನು ಇಐಎ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸಿ ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಗೌರಿ ಮೌಲೇಖಿ ಎಂಬವರು ಕಳೆದ ವರ್ಷ ಹಸಿರು ನ್ಯಾಯಮಂಡಳಿ ಮೊರೆ ಹೋಗಿದ್ದರು.

ಕಸಾಯಿಖಾನೆಗಳಲ್ಲಿ ನೀರಿನ ಮಿತಿ ಮೀರಿದ ಬಳಕೆ, ಘನತ್ಯಾಜ್ಯಗಳ ಅಸಮರ್ಪಕ ವಿಲೇವಾರಿಯಿಂದ ಜಲಮೂಲಗಳು ಕಲುಷಿತಗೊಳ್ಳುವುದು ಮತ್ತು ಪ್ರಾಣಿಗಳಿಂದ ಮಾನವನಿಗೆ ಕಾಯಿಲೆಗಳು ಹರಡುವ ಸಾಧ್ಯತೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದರು. 

ಕಳೆದ ವರ್ಷ ಆಗಸ್ಟ್‌ನಲ್ಲಿ ರಚಿಸಿದ್ದ ಎಂಟು ಸದಸ್ಯರ ಸಮಿತಿಯು ಸಿದ್ಧಪಡಿಸಿರುವ ವರದಿಯನ್ನು ಆಧರಿಸಿ, ಕೇಂದ್ರ ಪರಿಸರ ಸಚಿವಾಲಯವು ಈಚೆಗೆ ಎನ್‌ಜಿಟಿಗೆ ಪ್ರಮಾಣಪತ್ರ ಸಲ್ಲಿಸಿದೆ. 

‘ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಕಸಾಯಿಖಾನೆ/ ಮಾಂಸ ಸಂಸ್ಕರಣಾ ಘಟಕಗಳನ್ನು ನಿಯಂತ್ರಿಸಲು ಬೇಕಾದ ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳು ಈಗಾಗಲೇ ಜಾರಿಯಲ್ಲಿವೆ. ಆದ್ದರಿಂದ ಇವುಗಳನ್ನು ಇಐಎ ಅಡಿ ತರಬೇಕಾದ ಅವಶ್ಯಕತೆಯಿಲ್ಲ’ ಎಂದು ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT