ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರುಣಾಚಲ ಪ್ರದೇಶ: ನಾಲ್ಕು ದಿನಗಳಿಂದ ಹೊಸ ಕೋವಿಡ್ ಪ್ರಕರಣಗಳಿಲ್ಲ

Last Updated 10 ಮಾರ್ಚ್ 2021, 6:02 IST
ಅಕ್ಷರ ಗಾತ್ರ

ಇಟಾನಗರ‌: ಅರುಣಾಚಲ ಪ್ರದೇಶದಲ್ಲಿಕಳೆದ ನಾಲ್ಕು ದಿನಗಳಿಂದ ಒಂದೇ ಒಂದು ಹೊಸ ಕೋವಿಡ್‌ 19 ಪ್ರಕರಣ ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ರಾಜ್ಯದಲ್ಲಿ ಕೇವಲ ಮೂರು ಸಕ್ರಿಯ ಪ್ರಕರಣಗಳಿದ್ದು, 16,780 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,839 ಆಗಿದೆ ಎಂದು ರಾಜ್ಯ ಸರ್ವೈಲೆನ್ಸ್ ಅಧಿಕಾರಿ ಡಾ. ಲೊಬ್ಸಾಂಗ್ ಜಂಪಾ ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಇದುವರೆಗೆ 56 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇದುವರೆಗೆ 4,08,728 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಜಂಪಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT