ಕೋಯಿಕ್ಕೋಡ್: ಕೇರಳದಲ್ಲಿ ಸೆಪ್ಟೆಂಬರ್ 16ರ ನಂತರ ನಿಪಾ ವೈರಾಣುವಿನ ಯಾವುದೇ ಹೊಸ ಪ್ರಕರಣ ದೃಢಪಟ್ಟಿಲ್ಲ ಎಂದು ಕೇರಳ ಸರ್ಕಾರ ತಿಳಿಸಿದೆ.
'ಹೈ ರಿಸ್ಕ್' ಸಂಪರ್ಕ ಪಟ್ಟಿಯಲ್ಲಿದ್ದ 61 ಮಂದಿಯ ಮಾದರಿಗಳ ಫಲಿತಾಂಶ ನೆಗೆಟಿವ್ ಆಗಿದೆ ಎಂದು ಹೇಳಿದೆ
ಇದರಿಂದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಪಾ ವೈರಾಣುವಿನ ಎರಡನೇ ಅಲೆ ಎಬ್ಬುವ ಆಂತಕ ದೂರವಾಗಿದೆ.
ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷಾ ವರದಿ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕೇರಳದಲ್ಲಿ ಸೆಪ್ಟೆಂಬರ್ 15ರಂದು ಕೊನೆಯದಾಗಿ ನಿಪಾ ಪ್ರಕರಣ ದೃಢಪಟ್ಟಿತ್ತು.
ಕೇಂದ್ರ ವೈದ್ಯಕೀಯ ತಂಡವು ಸ್ಥಳಕ್ಕೆ ಭೇಟಿ ನೀಡಿ ಅಧ್ಯಯನ ನಡೆಸುತ್ತಿದೆ.