ಇಂಫಾಲ: ಸಂಘರ್ಷ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಭಾವ್ಯ ಭೇಟಿಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ರಾಜ್ಯದ (ಮಣಿಪುರ) ಮುಖ್ಯ ಕಾರ್ಯದರ್ಶಿ ಪಿ.ಕೆ. ಸಿಂಗ್ ಶುಕ್ರವಾರ ಹೇಳಿದ್ದಾರೆ.

ಈ ತಿಂಗಳ ಕೊನೆಯಲ್ಲಿ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂಬ ವರದಿಗಳ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಸಿಂಗ್, 'ಅಂತಹ ಯಾವುದೇ ಯೋಜನೆಗಳ ಬಗ್ಗೆ ನಮಗೆ ತಿಳಿದಿಲ್ಲ. ನಿರೀಕ್ಷೆ ಇದೆ. ಆದರೆ ಇಲ್ಲಿಯವರೆಗೆ ಅದು ಈಡೇರಿಲ್ಲ' ಎಂದು ತಿಳಿಸಿದ್ದಾರೆ.
.ಮಣಿಪುರಕ್ಕೆ ಭೇಟಿ ನೀಡಿಲ್ಲವೇಕೆ?: ಪ್ರಧಾನಿ ಮೋದಿ ವಿರುದ್ಧ ವಿಪಕ್ಷಗಳ ಟೀಕೆ.
ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ ಮೋಹನ್ ಮತ್ತು ರಾಜ್ಯಪಾಲ ಅಜಯ್ ಭಲ್ಲಾ ಅವರು ಪ್ರತ್ಯೇಕವಾಗಿ ಎರಡು ಸಭೆಗಳನ್ನು ನಡೆಸಿದ್ದಾರೆ. ಪ್ರಧಾನಿ ಸಂಭಾವ್ಯ ಭೇಟಿಯ ಬಗ್ಗೆ ಭದ್ರತಾ ಪಡೆಗಳಿಗೆ ತಿಳಿಸಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.
.ಮೋದಿ ವಿದೇಶ ಪ್ರವಾಸ: ಮಣಿಪುರಕ್ಕೆ ಭೇಟಿ ನೀಡುವ ಸಹಾನುಭೂತಿ ಇಲ್ಲವೇ?: ಕಾಂಗ್ರೆಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.