ತಿರುವನಂತಪುರ: ಸಂಸದ ಶಶಿ ತರೂರ್ ಸೇರಿದಂತೆ ಪಕ್ಷದ ಯಾವ ಸದಸ್ಯರು ವೀರ ಸಾವರ್ಕರ್ ಅವರ ಹೆಸರಿನಲ್ಲಿ ನೀಡುವ ಯಾವುದೇ ಪ್ರಶಸ್ತಿಯನ್ನು ಸ್ವೀಕರಿಸಬಾರದು ಎಂದು ಕಾಂಗ್ರೆಸ್ ಮುಖಂಡ ಕೆ. ಮುರಳೀಧರನ್ ಬುಧವಾರ ಹೇಳಿದ್ದಾರೆ.

‘ಬ್ರಿಟಿಷರ ಮುಂದೆ ತಲೆಬಾಗಿದವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಸ್ವೀಕರಿಸುವುದು ಸರಿಯಲ್ಲ’ ಎಂದಿದ್ದಾರೆ.

‘ತರೂರ್ ಅವರು ಸಾವರ್ಕರ್ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎಂದು ನಾನು ನಂಬುವುದಿಲ್ಲ. ಅವರು ಪ್ರಶಸ್ತಿ ಸ್ವೀಕರಿಸಿದರೆ ಅದರಿಂದ ಕಾಂಗ್ರೆಸ್ ಮುಜುಗರ ಅನುಭವಿಸುತ್ತದೆ’ ಎಂದು ಹೇಳಿದ್ದಾರೆ.

ಎಚ್ಆರ್ಡಿಎಸ್ ಇಂಡಿಯಾ, 2025ರ ವೀರ್ ಸಾವರ್ಕರ್ ಅಂತರರಾಷ್ಟ್ರೀಯ ಇಂಪ್ಯಾಕ್ಟ್ ಪ್ರಶಸ್ತಿಗೆ ಶಶಿ ತರೂರ್ ಅವರನ್ನು ಆಯ್ಕೆ ಮಾಡಿತ್ತು. ಇಂದು(ಬುಧವಾರ) ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು.

ಪ್ರಶಸ್ತಿ ಸ್ವೀಕರಿಸಲ್ಲ ಎಂದ ತರೂರ್

ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ‘ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹೋಗುತ್ತಿಲ್ಲ’ ಎಂದಿದ್ದಾರೆ.

‘ಮಾಧ್ಯಮಗಳ ಮೂಲಕ ನನಗೆ ಈ ವಿಷಯ ತಿಳಿದಿದೆ. ಆ ಪ್ರಶಸ್ತಿಯನ್ನು ಕೊಡುತ್ತಿರುವವರು ಯಾರು ಎಂದು ನನಗೆ ಗೊತ್ತಿಲ್ಲ. ಪ್ರಶಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವೂ ತಿಳಿದಿಲ್ಲ. ಅಲ್ಲದೇ ಆ ವೇಳೆ ನಾನು ಇಲ್ಲಿ ಇರುವುದಿಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.