ನವದೆಹಲಿ: ಮಹಿಳೆಯರಿಗೆ ಕೆಲಸ ಮಾಡಲು ಮತ್ತು ಬೆಳವಣಿಗೆ ಹೊಂದಲು ಬಿಜೆಪಿಯಷ್ಟು ಬೇರೆ ಯಾವ ಪಕ್ಷವೂ ಅವಕಾಶ ನೀಡಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಮಹಿಳೆಯರ ಸಬಲೀಕರಣಕ್ಕಾಗಿ ಮೋದಿ ಸರ್ಕಾರವು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.

ಮೋದಿ ಸರ್ಕಾರದ ಸಚಿವೆಯರಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷವು ತನ್ನ ನೀತಿ, ಕಾರ್ಯಕ್ರಮ, ಆಡಳಿತದಲ್ಲಿ ಉಳಿದೆಲ್ಲ ಪಕ್ಷಗಳಿಗಿಂತ ಹೆಚ್ಚು ಅವಕಾಶವನ್ನು ಮಹಿಳೆಯರಿಗೆ ನೀಡಿದೆ ಎಂದು ಹೇಳಿದ್ದಾರೆ.

ಓದಿ:ಬಸವರಾಜ ಬೊಮ್ಮಾಯಿಗೆ ಸಿ.ಎಂ ಪಟ್ಟ: ಮೇ 8ರಂದೇ ನಿರ್ಧಾರ ಕೈಗೊಂಡಿದ್ದ ವರಿಷ್ಠರು?

ಭಾರತದ ಸಂಸ್ಕೃತಿಯು ಮಹಿಳೆಯರಿಗೆ ಮೊದಲ ಆದ್ಯತೆ ನೀಡಿದೆ ಎಂದೂ ಅವರು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಕೇಂದ್ರ ಸಂಪುಟ ಪುನರ್‌ರಚನೆ ವೇಳೆ 7 ಮಂದಿ ಮಹಿಳೆಯರಿಗೆ ಸ್ಥಾನ ಕಲ್ಪಿಸಲಾಗಿತ್ತು. ಇದರೊಂದಿಗೆ ಕೇಂದ್ರ ಸಂಪುಟದಲ್ಲಿ ಮಹಿಳೆಯರ ಸಂಖ್ಯೆ 11ಕ್ಕೆ ಏರಿಕೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.