ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡ್ಡಾಯ ಮತದಾನ ಕಾನೂನು ಜಾರಿ ಇಲ್ಲ: ಕಿರಣ್‌ ರಿಜಿಜು

Last Updated 25 ಮಾರ್ಚ್ 2022, 13:13 IST
ಅಕ್ಷರ ಗಾತ್ರ

ನವದೆಹಲಿ: ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಕಾನೂನನ್ನು ಜಾರಿಗೊಳಿಸುವ ಪ್ರಸ್ತಾವ ಇಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಲೋಕಸಭೆಗೆ ಶುಕ್ರವಾರ ತಿಳಿಸಿದರು.

ಕೇಂದ್ರವು ಕಡ್ಡಾಯ ಮತದಾನ ಕಾನೂನು ಜಾರಿಗೊಳಿಸಲು ರಾಜ್ಯ ಸರ್ಕಾರಗಳು ಹಾಗೂ ಸಂಸ್ಥೆಗಳ ಸಲಹೆ ಕೇಳಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಸರ್ಕಾರದ ಸವಲತ್ತು ಮತ್ತು ಯೋಜನೆಗಳ ಫಲಾನುಭವಿಗಳು ಆಗಬೇಕಾದರೆ ಮತದಾನ ಪ್ರಮಾಣ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸುವ ಯಾವುದೇ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮತದಾನವನ್ನು ಉತ್ತೇಜಿಸಲು ಹಲವು ವರ್ಷಗಳಿಂದ ಚುನಾವಣಾ ಆಯೋಗವು ನಾನಾ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರೂ ಮತದಾನ ಪ್ರಮಾಣದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ 67 ರಷ್ಟು ಮತದಾನ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT