ನವದೆಹಲಿ: ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (ಪಿಎಂಜಿಕೆಎವೈ)’ ಅಡಿಯಲ್ಲಿ ವಿತರಿಸಲಾಗುತ್ತಿರುವ ಉಚಿತ ಪಡಿತರವನ್ನು ನವೆಂಬರ್ 30ರ ಬಳಿಕ ವಿಸ್ತರಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಶುಕ್ರವಾರ ಹೇಳಿದ್ದಾರೆ.

ಆರ್ಥಿಕತೆಯಲ್ಲಿ ಚೇತರಿಕೆ ಮತ್ತು ಮುಕ್ತ ಮಾರುಕಟ್ಟೆ ನೀತಿ (ಒಎಂಎಸ್‌ಎಸ್) ಅಡಿಯಲ್ಲಿ ಆಹಾರ ಧಾನ್ಯಗಳ ಉತ್ತಮ ವಿತರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಉಚಿತ ಪಡಿತರ ವಿತರಣೆ ಮುಂದುವರಿಸದಿರಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಓದಿ:ಎಕ್ಸೈಸ್ ಸುಂಕ ಇಳಿಕೆಯಿಂದ ಬೊಕ್ಕಸಕ್ಕೆ ₹45 ಸಾವಿರ ಕೋಟಿ ನಷ್ಟ

ಕೋವಿಡ್ ಸಾಂಕ್ರಾಮಿಕದ ಕಾರಣ 2020ರ ಮಾರ್ಚ್‌ನಲ್ಲಿ ಉಚಿತ ಪಡಿತರ ವಿತರಣೆ ಘೋಷಿಸಲಾಗಿತ್ತು. ಆರಂಭದಲ್ಲಿ 2020ರ ಏಪ್ರಿಲ್‌ನಿಂದ ಜೂನ್‌ವರೆಗೆ ನಿಗದಿಪಡಿಸಿದ್ದ ಯೋಜನೆಯನ್ನು ಬಳಿಕ ವಿಸ್ತರಿಸಲಾಗಿತ್ತು.

ಪಿಎಂಜಿಕೆಎವೈ ಅಡಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ವ್ಯಾಪ್ತಿಯಲ್ಲಿ ಬರುವ 80 ಕೋಟಿ ಪಡಿತರ ಕಾರ್ಡ್‌ದಾರರಿಗೆ ಸರ್ಕಾರವು ಉಚಿತವಾಗಿ ಪಡಿತರ ವಿತರಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.