ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬಿಸಿ ಕೆನೆಪದರ: ಆದಾಯ ಮಿತಿ ಪರಿಷ್ಕರಣೆ ಇಲ್ಲ– ಕೇಂದ್ರ

Last Updated 7 ಫೆಬ್ರುವರಿ 2023, 15:46 IST
ಅಕ್ಷರ ಗಾತ್ರ

ನವದೆಹಲಿ: ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೆನೆಪದರ ವಾರ್ಷಿಕ ಆದಾಯ ಮಿತಿ ₹ 8 ಲಕ್ಷ ಇದ್ದು, ಅದನ್ನು ಪರಿಷ್ಕರಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ಒಬಿಸಿ ಕೆನೆಪದರ ವಾರ್ಷಿಕ ಆದಾಯದ ಮಿತಿ ಸಮರ್ಪಕವಾಗಿದೆ. ಈ ಮಿತಿಯನ್ನು ಇಲ್ಲಿಯವರೆಗೆ ನಾಲ್ಕು ಬಾರಿ ಪರಿಷ್ಕರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ಸಚಿವ ವಿರೇಂದ್ರ ಕುಮಾರ್‌ ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದೊಳಗೆ ಈ ಕುರಿತ ವಾರ್ಷಿಕ ಆದಾಯದ ಮಿತಿಯನ್ನು ₹ 8 ಲಕ್ಷದಿಂದ ₹ 12 ಲಕ್ಷಕ್ಕೆ ಏರಿಸುವ ಪ್ರಸ್ತಾವ ಇದೆಯೇ ಎಂದು ಕಾಂಗ್ರೆಸ್‌ ಸದಸ್ಯ ಡೀನ್ ಕುರಿಯಾಕೋಸ್ ಪ್ರಶ್ನೆ ಕೇಳಿದ್ದರು.

ಒಬಿಸಿ ಕೆನೆಪದರ ಆದಾಯ ಮಿತಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದಿಂದ ಯಾವುದೇ ಅಧಿಕೃತ ಶಿಫಾರಸು ಬಂದಿಲ್ಲ ಸಚಿವರು ಸ್ಪಷ್ಟಪಡಿಸಿದ್ದಾರೆ.

1993ರ ಸೆಪ್ಟೆಂಬರ್‌ 8ರಿಂದ ಒಬಿಸಿ ಮೀಸಲು ನೀತಿ ಜಾರಿಗೆ ಬಂದಾಗ ಒಬಿಸಿ ಕೆನೆಪದರ ವಾರ್ಷಿಕ ಆದಾಯ ಮಿತಿಯನ್ನು ₹ 1 ಲಕ್ಷಕ್ಕೆ ಸೀಮಿತಗೊಳಿಸಲಾಗಿತ್ತು. ಆ ಬಳಿಕ ನಾಲ್ಕು ಬಾರಿ ಇದನ್ನು ಪರಿಷ್ಕರಿಸಲಾಗಿದೆ. ಕೇಂದ್ರ ಸರ್ಕಾರ 2017ರ ಸೆಪ್ಟೆಂಬರ್‌ನಲ್ಲಿ ಈ ಮಿತಿಯನ್ನು ₹ 6 ಲಕ್ಷದಿಂದ ₹ 8 ಲಕ್ಷಕ್ಕೆ ಪರಿಷ್ಕರಿಸಿತ್ತು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT