ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಮಾನ್ಯ ವಿಮಾ ಕಂಪನಿಗಳ ವಿಲೀನಕ್ಕೆ ಪ್ರಸ್ತಾಪವಿಲ್ಲ: ಕೇಂದ್ರ

Published 5 ಆಗಸ್ಟ್ 2024, 15:43 IST
Last Updated 5 ಆಗಸ್ಟ್ 2024, 15:43 IST
ಅಕ್ಷರ ಗಾತ್ರ

ನವದೆಹಲಿ: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳ ವಿಲೀನಕ್ಕೆ ಯಾವುದೇ ಪ್ರಸ್ತಾವವಿಲ್ಲ ಎಂದು ಸರ್ಕಾರ ಸೋಮವಾರ ತಿಳಿಸಿದೆ.

ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ, ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು 2019-20ರಿಂದ 2021-22 ರ ಅವಧಿಯಲ್ಲಿ ಮೂರು ಸಾರ್ವಜನಿಕ ವಲಯ ಉದ್ಯಮ (ಪಿಎಸ್‌ಯು) ಸಾಮಾನ್ಯ ವಿಮಾ ಕಂಪನಿಗಳಾದ ಓರಿಯೆಂಟಲ್ ಇನ್ಶೂರೆನ್ಸ್, ನ್ಯಾಷನಲ್ ಇನ್ಶೂರೆನ್ಸ್ ಮತ್ತು ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್‌ಗೆ ₹17,450 ಕೋಟಿಗಳನ್ನು ಹೂಡಿಕೆ ಮಾಡಿದೆ ಎಂದರು.

‘ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳ ವಿಲೀನ ಮಾಡುವ ಕುರಿತು ಸದ್ಯಕ್ಕೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ’ ಎಂದು ಹೇಳಿದರು.

2018–19ರ ಬಜೆಟ್‌ನಲ್ಲಿ ಅಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ, ಮೂರು ಕಂಪನಿಗಳನ್ನು ಒಂದು ವಿಮಾ ಘಟಕವಾಗಿ ವಿಲೀನಗೊಳಿಸಲಾಗುವುದು ಎಂದು ಘೋಷಿಸಿದ್ದರು.

ಈ ಕಂಪನಿಗಳ ಕಳಪೆ ಆರ್ಥಿಕ ಪರಿಸ್ಥಿತಿ ಸೇರಿದಂತೆ ವಿವಿಧ ಕಾರಣಗಳಿಂದ ಅವುಗಳನ್ನು ವಿಲೀನಗೊಳಿಸಲು ಸಾಧ್ಯವಾಗಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT