ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಒಬಿಸಿ ಮೀಸಲಾತಿ ಹಚ್ಚಿಸುವ ಪ್ರಸ್ತಾವ ಇಲ್ಲ: ಕೇಂದ್ರ ಸರ್ಕಾರ

Published 6 ಡಿಸೆಂಬರ್ 2023, 14:56 IST
Last Updated 6 ಡಿಸೆಂಬರ್ 2023, 14:56 IST
ಅಕ್ಷರ ಗಾತ್ರ

ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನಸಂಖ್ಯೆ ಆಧರಿಸಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಹೆಚ್ಚಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಬುಧವಾರ ರಾಜ್ಯಸಭೆಗೆ ತಿಳಿಸಲಾಯಿತು.

ಕೇಂದ್ರ ಪಂಚಾಯತಿ ರಾಜ್‌ ರಾಜ್ಯ ಖಾತೆ ಸಚಿವ ಕಪಿಲ್‌ ಮೋರೇಶ್ವರ್‌ ಪಾಟೀಲ್‌ ಅವರು ಈ ಕುರಿತ ಪ್ರಶ್ನೆಯೊಂದಕ್ಕೆ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದರು. ಸಂವಿಧಾನದ ವಿಧಿ 243ಡಿ ಅಡಿ ಒಬಿಸಿಗೆ ಮೂರನೇ ಒಂದರಷ್ಟು ಮೀಸಲಾತಿ ನೀಡಲಾಗುತ್ತಿದೆ. ದೇಶದ 21 ರಾಜ್ಯಗಳು ಮೀಸಲಾತಿಯನ್ನು ಶೇ 50ಕ್ಕೆ ಹೆಚ್ಚಿಸಿವೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT