ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾವಣೆ ಮಾಡುವ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.

ಈ ಕುರಿತು ಲೋಕಸಭೆಯಲ್ಲಿ ಬುಧವಾರ ಲಿಖಿತ ಉತ್ತರ ನೀಡಿರುವ ಜಿತೇಂದ್ರ ಸಿಂಗ್, ‘ಆ ರೀತಿಯ ಯಾವುದೇ ಪ್ರಸ್ತಾವ ಸರ್ಕಾರದ ಪರಿಶೀಲನೆಯಲ್ಲಿ ಇಲ್ಲ’ ಎಂದರು. ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಈಗ 60 ವರ್ಷ ಇದೆ.

‘ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡುವಂತೆ ನಿರ್ದೇಶನ ನೀಡಲಾಗುತ್ತಿದೆ. ಹುದ್ದೆಗಳ ಭರ್ತಿಗೆ ‘ರೋಜಗಾರ್ ಮೇಳ’ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.