ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸ್ಕೃತವನ್ನು ಅಧಿಕೃತ ಭಾಷೆಯನ್ನಾಗಿಸುವ ಪ್ರಸ್ತಾವ ಇಲ್ಲ: ಕೇಂದ್ರ ಸರ್ಕಾರ

Last Updated 28 ಮಾರ್ಚ್ 2023, 11:26 IST
ಅಕ್ಷರ ಗಾತ್ರ

ನವದೆಹಲಿ: ‘ಸಂಸ್ಕೃತವನ್ನು ಸಂವಹನ ಮತ್ತು ಅಧಿಕೃತ ಭಾಷೆಯನ್ನಾಗಿ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಪರಿಶೀಲನೆಯಲ್ಲಿಲ್ಲ’ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಲೋಕಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ.

ಬಿಜೆಪಿ ಸದಸ್ಯ ಸುಬ್ರತ್‌ ಪಾಠಕ್‌ ಅವರು, ‘ಹಿಂದಿ ಭಾಷೆಯ ಜೊತೆಗೆ ಸಂಸ್ಕೃತವನ್ನೂ ಸಂವಹನ ಮತ್ತು ಅಧಿಕೃತ ಭಾಷೆಯನ್ನಾಗಿ ಮಾಡಲು ಸರ್ಕಾರ ಚಿಂತಿಸುತ್ತಿದೆಯೇ’ ಎಂದು ಕೇಳಿದ ಪ್ರಶ್ನೆಗೆ ಮಿಶ್ರಾ ಅವರು ನೀಡಿರುವ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT