ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ರದ್ದು: ಪ್ರತಿಪಕ್ಷಗಳ ಆಕ್ರೋಶ

Last Updated 2 ಸೆಪ್ಟೆಂಬರ್ 2020, 12:06 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿ ರಾಜ್ಯಸಭಾ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ತೃಣಮೂಲ ಕಾಂಗ್ರೆಸ್‌ ಸಂಸದ ಡೆರೆಕ್ ಒಬ್ರಿಯಾನ್‌, '1950ರ ನಂತರ ಇದೇ ಮೊದಲ ಬಾರಿ ವಿರೋಧ ಪಕ್ಷಗಳ ಸಂಸದರು ಸರ್ಕಾರವನ್ನು ಪ್ರಶ್ನಿಸುವ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ. ಸಂಸತ್ತಿನ ಒಟ್ಟು ಅಧಿವೇಶನದ ಸಮಯ ಅಷ್ಟೇ ಇದೆ. ಹಾಗಿದ್ದರೆ, ಪ್ರಶ್ನೋತ್ತರ ಅವಧಿಯನ್ನು ಏಕೆ ರದ್ದುಗೊಳಿಸಬೇಕು? ಪ್ರಜಾಪ್ರಭುತ್ವವನ್ನು ಹತ್ಯೆಗೈಯ್ಯಲು ಸಾಂಕ್ರಾಮಿಕದ ನೆಪ ಒಡ್ಡಲಾಗಿದೆ' ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಅವರು ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ವಿರೋಧಿಸಿದ್ದಾರೆ.

'ಪ್ರಶ್ನೋತ್ತರ ಅವಧಿ ರದ್ದುಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ನಾವು ಸರ್ಕಾರವನ್ನು ಕೋರುತ್ತೇವೆ' ಎಂದು ಚೌಧರಿ ಹೇಳಿದ್ದಾರೆ.

'ಇಡೀ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸುವ ಬಿಜೆಪಿ ಸರ್ಕಾರದ ನಿರ್ಧಾರವು ಒಂದು ಸಂದೇಶವನ್ನು ನೀಡುತ್ತದೆ - ಚುನಾಯಿತ ಪ್ರತಿನಿಧಿಗಳಿಗೂ ಸಹ ಸರ್ಕಾರವನ್ನು ಪ್ರಶ್ನಿಸುವ ಹಕ್ಕಿಲ್ಲ' ಎಂದು ಸಂಸದೆ ಕನ್ನಿಮೋಳಿ ಟ್ವೀಟ್‌ ಮಾಡಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ಮತ್ತು ಸಚಿವರಲ್ಲದ ಸದಸ್ಯರ ಮಂಡನೆಗಳಿಗೆ ಅವಕಾಶ ಇರುವುದಿಲ್ಲ ಎಂದು ರಾಜ್ಯಸಭಾ ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT