ನವದೆಹಲಿ: ದೇಶದಲ್ಲಿ ಸ್ಪುಟ್ನಿಕ್–ವಿ ಕೋವಿಡ್–19 ಲಸಿಕೆಯ ಪೂರೈಕೆಗೆ ಯಾರ ಜತೆಗೂ ಒಪ್ಪಂದ ಮಾಡಿಕೊಳ್ಳುತ್ತಿಲ್ಲ ಎಂದು ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಸ್ಪಷ್ಟಪಡಿಸಿದೆ.

ಸ್ಪುಟ್ನಿಕ್–ವಿ ಲಸಿಕೆಯ ಹೆಸರಿನಲ್ಲಿ ವಂಚನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿರುವುದಾಗಿಯೂ ಸಂಸ್ಥೆ ಹೇಳಿದೆ.

ಭಾರತದಲ್ಲಿ ಮೊದಲ 25 ಕೋಟಿ ಡೋಸ್ ಲಸಿಕೆ ಪೂರೈಕೆಗೆ ಹಕ್ಕು ಹೊಂದಿರುವುದಾಗಿ ರಷ್ಯಾದ ನೇರ ಹೂಡಿಕೆ ನಿಧಿಯೊಂದಿಗೆ (ಆರ್‌ಡಿಐಎಫ್) ಮತ್ತು ರೆಡ್ಡೀಸ್ ಲ್ಯಾಬೊರೇಟರೀಸ್ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ದೇಶದಲ್ಲಿ ಸ್ಪುಟ್ನಿಕ್–ವಿ ಲಸಿಕೆ ನೀಡಿಕೆಗೆ ಇತ್ತೀಚೆಗೆ ಚಾಲನೆ ನೀಡಲಾಗಿತ್ತು.

ರಷ್ಯಾದಲ್ಲಿ ಅಭಿವೃದ್ಧಿಪಡಿಸಲಾಗಿರುವ ಸ್ಪುಟ್ನಿಕ್–ವಿ ಲಸಿಕೆಯ ಪೂರೈಕೆಯನ್ನು ಭಾರತದಲ್ಲಿ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಮಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.