ನವದೆಹಲಿ: ವ್ಯಾಪಾರ ವಿಷಯ ಮುಂದಿಟ್ಟುಕೊಂಡು ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿರುವುದಾಗಿ ಜಪಾನ್ ಪ್ರವಾಸ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಪುನರುಚ್ಛರಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ ಕುರಿತ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, ‘ನವದೆಹಲಿಯಲ್ಲಿರುವ ಅವರ(ಟ್ರಂಪ್) ಆತ್ಮೀಯ ಸ್ನೇಹಿತ(ಮೋದಿ) ಇನ್ನು ಮುಂದೆ ಅವರನ್ನು ಆಲಂಗಿಸಲು ಬಯಸದಿದ್ದರೆ ಅದರಲ್ಲಿ ಅಚ್ಚರಿಯಿಲ್ಲ’ ಎಂದು ಪರೋಕ್ಷವಾಗಿ ಕುಟುಕಿದ್ದಾರೆ.

‘ಭಾರತ–ಪಾಕ್ ಯುದ್ಧ ನಿಲ್ಲಿಸಿದ್ದಾಗಿ ಟ್ರಂಪ್ ಇಲ್ಲಿಯವರೆಗೆ 54 ಬಾರಿ ಹೇಳಿದ್ದಾರೆ. ಈ ಮಾತನ್ನು ಅವರು ಅಮೆರಿಕ, ಕತಾರ್, ಸೌದಿ ಅರೇಬಿಯಾ, ಈಜಿಪ್ಟ್, ಬ್ರಿಟನ್ನಲ್ಲಿಯೂ ಹೇಳಿದ್ದರು. ನೆಲದ ಮೇಲೆ, ವಿಮಾನದಲ್ಲಿ ಹಾರಾಟ ನಡೆಸುತ್ತಿರುವಾಗಲೂ ಈ ಬಗ್ಗೆ ಮಾತನಾಡಿದ್ದರು. ಇದೀಗ ಜಪಾನ್ನಲ್ಲಿಯೂ ಅದನ್ನೇ ಹೇಳಿದ್ದಾರೆ’ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಮಂಗಳವಾರ ಸಂಜೆ ಜಪಾನ್ನಲ್ಲಿ ನಡೆದ ಉದ್ಯಮಿಗಳ ಸಭೆಯಲ್ಲಿ ಮಾತನಾಡಿದ ಟ್ರಂಪ್, ವ್ಯಾಪಾರ ವಿಷಯ ಮುಂದಿಟ್ಟು ಭಾರತ–ಪಾಕ್ ಯುದ್ಧ ನಿಲ್ಲಿಸಿದ್ದಾಗಿ ಹೇಳಿದ್ದರು.

‘ಸುಂಕಗಳಿಂದಾಗಿಯೇ ನಾನು ಹಲವು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ ವ್ಯಾಪಾರ ಮತ್ತು ಸುಂಕದಿಂದಾಗಿ ನಾನು ಜಗತ್ತಿಗೆ ದೊಡ್ಡ ಸೇವೆ ಸಲ್ಲಿಸಿದ್ದೇನೆ. ನೀವು ಭಾರತ ಮತ್ತು ಪಾಕಿಸ್ತಾನವನ್ನು ನೋಡಿದರೆ ಅದು ತಿಳಿಯುತ್ತದೆ’ ಎಂದು ಟ್ರಂಪ್ ಹೇಳಿದ್ದರು.

‘ಭಾರತ–ಪಾಕ್ ಯುದ್ಧದ ವೇಳೆ ಏಳು ವಿಮಾನಗಳನ್ನು ಹೊಡೆದುರುಳಿಸಲಾಯಿತು. ನೀವು ಯುದ್ಧ ಮುಂದುವರಿಸಿದರೆ ನಿಮ್ಮೊಂದಿಗೆ ವ್ಯಾಪಾರ ಮಾಡುವುದಿಲ್ಲ ಎಂದು ಭಾರತದ ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಫೀಲ್ಡ್ ಮಾರ್ಷಲ್ಗೆ ಹೇಳಿದ್ದೆ. ಆ ಮೂಲಕ ಯುದ್ಧವನ್ನು ನಿಲ್ಲಿಸಿದೆ’ ಎಂದು ಅವರು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.