ಬಾಲಕಿ ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಕಾರ್ಮಿಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಷಯವನ್ನು ಬಾಲಕಿ ತನ್ನ ಶಿಕ್ಷಕರಿಗೆ ತಿಳಿಸಿದ್ದು , ಪ್ರಾಂಶುಪಾಲರಿಗೂ ತಿಳಿಸಲಾಗಿದೆ. ಆದರೆ ಶಾಲೆಯ ಆಡಳಿತ ಮಂಡಳಿ ವಿಷಯವನ್ನು ಮುಚ್ಚಿ ಹಾಕಲು ಯತ್ನಿಸಿದೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಆರೋಪಿ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.