ನೋಯ್ಡಾ: ಇಲ್ಲಿನ ಸೆಕ್ಟರ್ 4ರಲ್ಲಿರುವ ವಿದ್ಯುತ್ ಮೀಟರ್ ತಯಾರಿಕಾ ಕಾರ್ಖಾನೆಯಲ್ಲಿ ಗುರುವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 26 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಹಂತ 1 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕ್ಯಾಪಿಟಲ್ ಪವರ್ ಸಿಸ್ಟಂ ಲಿಮಿಟೆಡ್ನಲ್ಲಿ ಅವಘಢ ಸಂಭವಿಸಿದೆ. ಈ ವೇಳೆ ಕಾರ್ಖಾನೆಯಲ್ಲಿ ಸುಮಾರು 240 ಕಾರ್ಮಿಕರಿದ್ದರು. ರಕ್ಷಣಾ ತಂಡಗಳು ಕಿಟಕಿಗಳನ್ನು ಒಡೆದು ಅವರನ್ನು ಸ್ಥಳಾಂತರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕದಳದ ಸುಮಾರು 20 ವಾಹನಗಳು ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸಿದವು. ಅವಘಡಕ್ಕೆ ಕಾರಣವೇನು ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ.

ಗಾಯಗೊಂಡವರಲ್ಲಿ ಕೆಲವರು ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವರಿಗೆ ಮೂಳೆಮುರಿತ ಉಂಟಾಗಿದೆ ಎಂದು ಹೆಚ್ಚುವರಿ ಡಿಸಿಪಿ ಮನೀಶ್ ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.