ನೊಯ್ಡಾ: ಮೂರುವರೆ ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಈಜು ಶಿಕ್ಷಕನಿಗೆ ಇಲ್ಲಿನ ಗೌತಮ ಬುದ್ಧ ನಗರ ಜಿಲ್ಲೆಯ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ₹24,000 ದಂಡವನ್ನೂ ವಿಧಿಸಿದೆ.

ಉತ್ತರ ಪ್ರದೇಶದ ನೊಯಿಡಾದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಮಕ್ಕಳಿಗೆ ಈಜು ಕಲಿಸುತ್ತಿದ್ದ ಚಂಡಿದಾಸ ಎಂಬಾತ 2018ರಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ವಿಶೇಷ ನ್ಯಾಯಾಲಯವು ಮಂಗಳವಾರ ಅಂತಿಮ ಆದೇಶ ನೀಡಿದ್ದು, ಈಜು ಶಿಕ್ಷಕ ಅಪರಾಧಿ ಎಂದು ತೀರ್ಮಾನಿಸಿದೆ.

ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ, ಸಂತ್ರಸ್ತ ಬಾಲಕಿ ಹಾಗೂ ಆಕೆಯ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡುವಂತೆ, ಶಾಲೆಯನ್ನು ನಡೆಸುತ್ತಿರುವ ಡಿಪಿಎಸ್ ಸೊಸೈಟಿಗೆ ನ್ಯಾಯಾಲಯ ನಿರ್ದೇಶಿಸಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಒಂದು ತಿಂಗಳ ಒಳಗಾಗಿ ಈ ಹಣವನ್ನು ನೀಡಬೇಕೆಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.