ನವದೆಹಲಿ: ನಾಲ್ಕನೇ ಹಂತದಲ್ಲಿ ಮತದಾನ ನಡೆಯಲಿರುವ ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಗುರುವಾರ ಆರಂಭಗೊಂಡಿತು.

ಒಂಬತ್ತು ರಾಜ್ಯಗಳ 96 ಕ್ಷೇತ್ರಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಮೇ 13 ರಂದು ನಾಲ್ಕನೇ ಹಂತದ ಮತದಾನ ನಡೆಯಲಿದೆ. ಈ ಕುರಿತು ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ.

ಆಂಧ್ರಪ್ರದೇಶ ಮತ್ತು ತೆಲಂಗಾಣದ ಎಲ್ಲಾ ಕ್ಷೇತ್ರಗಳಿಗೆ ಈ ಹಂತದಲ್ಲೇ ಮತದಾನ ನಡೆಯಲಿದೆ ಎಂದು ಆಯೋಗದ ಅಧಿಕಾರಿಗಳು ತಿಳಿಸಿದರು. ಆಂಧ್ರಪ್ರದೇಶದಲ್ಲಿ ಮೇ 13ರಂದು ಲೋಕಸಭಾ ಚುನಾವಣೆಯ ಜೊತೆಗೆ ವಿಧಾನಸಭೆಗೂ ಮತದಾನ ನಡೆಯಲಿದೆ. ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಉತ್ತರಪ್ರದೇಶದ ವಿವಿಧ ಕ್ಷೇತ್ರಗಳಿಗೂ ಇದೇ ದಿನ ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದ್ದು, ಏಪ್ರಿಲ್ 26ರಂದು ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 29 ಕೊನೆಯ ದಿನ ಎಂದು ಅಧಿಕಾರಿಗಳು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.