ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ

ಅಧಿಸೂಚನೆ ಪ್ರಕಟಿಸಿದ ಚುನಾವಣಾ ಆಯೋಗ
Last Updated 15 ಜೂನ್ 2022, 10:21 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಚುನಾವಣಾ ಆಯೋಗ ಬುಧವಾರ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ಜೂನ್‌ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 30ರಂದು ಪರಿಶೀಲನೆ ನಡೆಯಲಿದೆ. ಜುಲೈ 2 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಜುಲೈ 21ರಂದು ಚುನಾವಣೆ ನಡೆಯಲಿದೆ.

ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳುವುದು.

ವಿಪಕ್ಷಗಳ ಸಭೆ: ಒಂದೆಡೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತರೆ, ಇನ್ನೊಂದೆಡೆ, ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಸಭೆ ನವದೆಹಲಿಯಲ್ಲಿ ಬುಧವಾರ ನಡೆಯಿತು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಸಭೆಯನ್ನು ಆಯೋಜಿಸಿದ್ದರು. ಎನ್‌ಡಿಎ ಅಭ್ಯರ್ಥಿ ವಿರುದ್ಧ ವಿಪಕ್ಷಗಳ ಉಮೇದುವಾರರೊಬ್ಬರನ್ನು ಕಣಕ್ಕಿಳಿಸುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ.

ಕೆಲ ವಿರೋಧ ಪಕ್ಷಗಳ ನಾಯಕರು ಈ ಸಭೆಯಿಂದ ದೂರ ಉಳಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT