ಮುಂಬೈ: ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಆಂಬುಲೆನ್ಸ್ ಚಾಲಕರೊಬ್ಬರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆದರಿಕೆ ಹಾಕಿರುವ ಆಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬೆನ್ನಲ್ಲೇ ಪೊಲೀಸರು ಕ್ರಮಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

‘ನಾನು ಬಿಷ್ಣೋಯಿ ಗ್ಯಾಂಗ್ನಿಂದ ಕರೆ ಮಾಡುತ್ತಿದ್ದೇನೆ. ನಿನ್ನನ್ನು ಗುಂಡಿಕ್ಕಿ ಹತ್ಯೆ ಮಾಡುತ್ತೇವೆ. ಈ ಸಂಬಂಧ ಪಟ್ಟಿಯನ್ನು ಸಿದ್ಧಪಡಿಸಿದ್ದೇವೆ’ ಎಂದು ಅಪರಿಚಿತ ವ್ಯಕ್ತಿ, ಆಂಬುಲೆನ್ಸ್ ಚಾಲಕನಿಗೆ ಬೆದರಿಕೆ ಹಾಕಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

‘ಕರೆ ಮಾಡಿದ ವ್ಯಕ್ತಿಗೆ ಬಾರ್ ಗರ್ಲ್ ಜೊತೆ ಅನೈತಿಕ ಸಂಬಂಧವಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಕೆಲವು ದಿನಗಳ ಹಿಂದಷ್ಟೇ ಆಂಬುಲೆನ್ಸ್ ಚಾಲಕ ಆ ಮಹಿಳೆಯೊಂದಿಗೆ ಕಾಣಿಸಿಕೊಂಡಿದ್ದ. ಇದರಿಂದ ಕೋಪಗೊಂಡಿದ್ದ ವ್ಯಕ್ತಿ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದೇ ರೀತಿಯ ಕರೆಗಳನ್ನು ಇತರ ಮೂವರಿಗೆ ಮಾಡಿದ್ದೇನೆ’ ಎಂದು ಅಧಿಕಾರಿ ವಿವರಿಸಿದ್ದಾರೆ.

ಘಟನೆ ಸಂಬಂಧ ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.